
ಮಂಗಳವಾರ ಬಂಟ್ವಾಳದ ಸ್ಪರ್ಶ ಕಲಾಮಂದಿರಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಮಹಿಳಾ ಸಮಾವೇಶ ನಡೆಯಿತು.ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಉದ್ಘಾಟಿಸಿ ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಜೀವನಮಟ್ಟ ಸುಧಾರಣೆಯಾಗಿದ್ದು, ಇದೊಂದು ಕ್ರಾಂತಿ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ ಹಿಂದಿನ ಕಾಂಗ್ರೆಸ್ ಸರಕಾರಗಳು ತಂದ ಮಹಿಳಾಪರ ಯೋಜನೆಗಳನ್ನು ನೆನಪಿಸಿ, ಪ್ರಸಕ್ತ ವಿದ್ಯಮಾನಗಳ ಕುರಿತು ಮಾತನಾಡಿದರು.ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶ್ಯಾಲೆಟ್ ಪಿಂಟೊ, ನಗರ ಜಿಲ್ಲಾಧ್ಯಕ್ಷೆ ಅಪ್ಪಿ, ಗ್ರಾಮಾಂತರ ಜಿಲ್ಲಾಧ್ಯಕ್ಷೆ ಉಷಾ ಅಂಚನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಆರ್. ಅಂಚನ್, ಚಂದ್ರಶೇಖರ ಭಂಡಾರಿ ಅಮ್ಮುಂಜೆ, ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಐಡಾ ಸುರೇಶ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್, ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಲೊರೆಟ್ಟೋ, ಬೂಡ ಅಧ್ಯಕ್ಷ ಬೇಬಿ ಕುಂದರ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ಪಕ್ಷದ ಪ್ರಮುಖರಾದ ಪಿಯೂಸ್ ಎಲ್. ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಿ.ಪದ್ಮಶೇಖರ್ ಜೈನ್, ಅಶ್ವನಿಕುಮಾರ್ ರೈ, ಪದ್ಮನಾಭ ರೈ, ಸುದೀಪ್‌ಕುಮಾರ್ ಶೆಟ್ಟಿ, ಅಬ್ಬಾಸ್ ಆಲಿ, ನಾರಾಯಣ ನಾಯ್ಕ್, ನಮಿತಾ ಡಿ.ರಾವ್, ನಮಿತಾ ಪೂಜಾರಿ ಉಪಸ್ಥಿತರಿದ್ದರು. ಬಂಟ್ವಾಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲವಿನಾ ವಿಲ್ಮಾ ಮೊರಾಸ್ ಸ್ವಾಗತಿಸಿದರು. ಜವಹರಲಾಲ್ ಬಾಲ್ ಮಂಚ್ ಜಿಲ್ಲಾಧ್ಯಕ್ಷೆ ಶೈಲಜಾ ರಾಜೇಶ್ ಕಾರ್ಯಕ್ರಮ ನಿರ್ವಹಿಸಿದರು.

ಮಂಗಳವಾರ ಬಂಟ್ವಾಳದ ಸ್ಪರ್ಶ ಕಲಾಮಂದಿರಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಮಹಿಳಾ ಸಮಾವೇಶ ನಡೆಯಿತು.

OPTIC WORLD


Be the first to comment on "Bantwal: ಬಂಟ್ವಾಳದಲ್ಲಿ ಕಾಂಗ್ರೆಸ್ ನಿಂದ ಮಹಿಳಾ ಸಮಾವೇಶ"