ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ದೇವರಾಜ ಅರಸು ಕಾರಣಕರ್ತರಾಗಿದ್ದು, ಅವರ ಕೊಡುಗೆ ಅಪಾರವಾಗಿದೆ ಎಂದು ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಹೇಳಿದರು.ಬುಧವಾರ ಬಂಟ್ಚಾಳ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಬಂಟ್ವಾಳ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಸಾಮಾಜಿಕ ಅಭಿವೃದ್ಧಿ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ೧೧೦ನೇ ಜನ್ಮದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ದೇವರಾಜ ಅರಸು ಅವರ ದೆಸೆಯಿಂದಾಗಿ ಇಂದು ಹಿಂದುಳಿದ ವರ್ಗದವರು ನೆಮ್ಮದಿಯ ಬದುಕು ಕಾಣುವಂತಾಗಿದೆ ಎಂದು ವಾಸು ಪೂಜಾರಿ ಹೇಳಿದರು.ಇದೇ ಸಂದರ್ಭ ಬಿಸಿಎಂ ಹಾಸ್ಟೆಲ್ ಗಳಲ್ಲಿ ಕಲಿಯುತ್ತಿರುವ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್, ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್ ರೈ, ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಜೋ ಪ್ರದೀಪ್ ಡಿಸೋಜ, ಪ್ರಭಾರ ಬಿಇಓ ನೋಣಯ್ಯ, ಜಾನುವಾರು ಅಭಿವೃದ್ಧಿ ಅಧಿಕಾರಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು. ನಿಯಮಪಾಲಕ ಆನಂದ, ಹಾಗೂ ಪುಷ್ಪಲತಾ ಬಹುಮಾನಿತರ ಪಟ್ಟಿ ವಾಚಿಸಿದರು. ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶೇಷಗಿರಿ ನಾಯ್ಕ್ ಸ್ವಾಗತಿಸಿದರು. ವಿದ್ಯಾರ್ಥಿನಿ ಶ್ರೇಯಾ ಕಾರ್ಯಕ್ರಮ ನಿರೂಪಿಸಿದರು
OPTIC WORLD