
ಸಿದ್ದಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಸದಸ್ಯರಾಗಿ ಬೆಳೆಸಾಲ ಪಡೆದು ಮೃತರಾದ ಸದಸ್ಯರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಮರಣ ಹೊಂದಿದ ಕುಟುಂಬದ ನಾಮಿನಿ 22 ಸದಸ್ಯರುಗಳಿಗೆ ರೈತ ಕಲ್ಯಾಣ ನಿಧಿ ಯೋಜನೆಯಡಿ ತಲಾ ರೂ.10 ಸಾವಿರದಂತೆ ರೂ.2.20 ಲಕ್ಷ ರೈತ ಕಲ್ಯಾಣ ನಿಧಿಯನ್ನು ಸಂಘದ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ವಿತರಿಸಲಾಯಿತು .
ಸಿದ್ದಕಟ್ಟೆ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ರತ್ನಕುಮಾರ್ ಚೌಟ ಮುಖ್ಯ ಅತಿಥಿಯಾಗಿ ಭಾಗವಹಿಸಿ ರೈತ ಕಲ್ಯಾಣ ನಿಧಿಯನ್ನು ಫಲಾನುಭವಿಗಳಿಗೆ ವಿತರಿಸಿದರು

OPTIC WORLD
ಈ ಸಂದರ್ಭ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಮಾತಾನಾಡಿ, ಬೆಳೆ ಸಾಲ ಪಡೆದುಕೊಂಡು ಸಂಘದಲ್ಲಿ ವ್ಯವಹಾರ ಮಾಡಿಕೊಂಡು ಬರುತ್ತಿದ್ದ ರೈತ ಸದಸ್ಯರು ಮರಣ ಹೊಂದಿದಾಗ ಕುಟುಂಬಕ್ಕೆ ಆರ್ಥಿಕ ಸಹಕಾರ ನೀಡುವ ಉದ್ದೇಶದಿಂದ ಸಂಘವು ರೈತ ಕಲ್ಯಾಣ ನಿಧಿ ಯೋಜನೆಯನ್ನು ಸ್ಥಾಪಿಸಿ, ಯೋಜನೆಯಡಿಯಲ್ಲಿ ಮೃತ ಸದಸ್ಯರ ಕುಟುಂಬಕ್ಕೆ ಸಹಾಯ ಮಾಡುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭ ಸಂಘದ ಉಪಾಧ್ಯಕ್ಷ ಸಂದೇಶ್ ಶೆಟ್ಟಿ ಪೊಡುಂಬ, ನಿರ್ದೇಶಕರಾದ ಸತೀಶ್ ಪೂಜಾರಿ, ದಿನೇಶ್ ಪೂಜಾರಿ ,ರಶ್ಮಿತ್ ಶೆಟ್ಟಿ,ಚಂದ್ರಶೇಖರ ಶೆಟ್ಟಿ , ಜಾರಪ್ಪ ನಾಯ್ಕ, ವೀರಪ್ಪ ಪರವ, ವಿಶ್ವನಾಥ ಶೆಟ್ಟಿಗಾರ್, ಎ ಶಿವ ಗೌಡ, ಮಂದಾರತಿ ಎಸ್ ಶೆಟ್ಟಿ , ಪುಷ್ಪಲತಾ ಎಸ್ ಆರ್ ಹಾಗೂ ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರೂಪಿಸಿ ,ಧನ್ಯವಾದವಿತ್ತರು .


Be the first to comment on "Siddakatte: ಸಿದ್ದಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಿಂದ 2.20 ಲಕ್ಷ ರೂ ರೈತ ಕಲ್ಯಾಣ ನಿಧಿ ವಿತರಣೆ"