OPTIC WORLD
ಬಂಟ್ವಾಳ: ಜಮೀಯ್ಯತಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಮೆಲ್ಕಾರ್ ನ ಸಂಸ್ಥೆಯ ನೂತನ ಕಚೇರಿಯಲ್ಲಿ ನಡೆಯಿತು.
ಸಂಸ್ಥೆಯ ಅಧ್ಯಕ್ಷ ರಶೀದ್ ವಿಟ್ಲ ಅದ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಲಯನ್ಸ್ ಭವನದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ವೀಕ್ಷಕರಾಗಿ ಭಾಗವಹಿಸಿದ್ದ ಜಮೀಯ್ಯತುಲ್ ಫಲಾಹ್ ಕೇಂದ್ರೀಯ ಘಟಕದ ಕೋಶಾಧಿಕಾರಿ ನ್ಯಾಯವಾದಿ ಕೆ.ಎಂ.ಸಿದ್ದೀಕ್ ಪುತ್ತೂರು ಹಾಗೂ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಮಹಮ್ಮದ್ ಬಪ್ಪಳಿಗೆ 2025-27 ನೇ ಸಾಲಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟಿದ್ದರು.
ನಿರ್ಗಮನ ಅಧ್ಯಕ್ಷ ರಶೀದ್ ವಿಟ್ಲ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಎಂ.ಅಬ್ಬಾಸ್ ಅಲಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಇದೇ ವೇಳೆ ನೂತನ ಕಾರ್ಯದರ್ಶಿ ಹಕೀಂ ಕಲಾಯಿ ಹಾಗೂ ಕೋಶಾಧಿಕಾರಿ ಲತೀಫ್ ನೇರಳಕಟ್ಟೆ ಅವರಿಗೆ ಜವಾಬ್ದಾರಿ ವಹಿಸಿಕೊಡಲಾಯಿತು.
ಈ ಸಂದರ್ಭ ನಿರ್ಗಮನ ಕೋಶಾಧಿಕಾರಿ ಎಂ.ಎಚ್.ಇಕ್ಬಾಲ್ ಮೆಲ್ಕಾರ್, ನೂತನ ಉಪಾಧ್ಯಕ್ಷರಾದ ಆಸಿಫ್ ಇಕ್ಬಾಲ್ ಕುಂಪನಮಜಲು, ಬಿ.ಎಂ.ತುಂಬೆ, ಜೊತೆ ಕಾರ್ಯದರ್ಶಿ ಕೆ.ಎಸ್. ಮಹಮ್ಮದ್ ಕಡೇಶ್ವಾಲ್ಯ, ಸಂಘಟನಾ ಕಾರ್ಯದರ್ಶಿ ಶೇಖ್ ರಹ್ಮತುಲ್ಲಾ ಕಾವಳಕಟ್ಟೆ, ಪತ್ರಿಕಾ ಕಾರ್ಯದರ್ಶಿ ಆಶಿಕ್ ಕುಕ್ಕಾಜೆ ಕಾರ್ಯಕಾರೀ ಸಮಿತಿ ಸದಸ್ಯರಾದ ಮಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು, ಎಫ್.ಎಂ. ಬಶೀರ್ ಫರಂಗಿಪೇಟೆ, ರಫೀಕ್ ಹಾಜಿ ಆಲಡ್ಕ , ನೋಟರಿ ಅಬೂಬಕರ್ ವಿಟ್ಲ, ಅಬ್ದುಲ್ ರಝಾಕ್ ಅನಂತಾಡಿ, ಮಹಮ್ಮದ್ ನಾರಂಕೋಡಿ, ಪಿ.ಮಹಮ್ಮದ್ ಪಾಣೆಮಂಗಳೂರು, ಆನಿಯಾ ದರ್ಬಾರ್ ಹಂಝ ಬಸ್ತಿಕೋಡಿ, ವಿ.ಎಚ್.ಅಶ್ರಫ್ ವಿಟ್ಲ, ಸಾಗರ್ ಮಹಮ್ಮದ್ ಪರ್ಲಿಯ ಉಪಸ್ಥಿತರಿದ್ದರು