ಮಂಗಳೂರು: ಖೋಟಾನೋಟು ಪ್ರಕರಣವೊಂದರಲ್ಲಿ ಮಂಗಳೂರು ಪೊಲೀಸರಿಗೆ ಬೇಕಾಗಿದ್ದ ಆರೋಪಿ ನಿಜಾಮುದ್ದೀನ್ ಅಲಿಯಾಸ್ ನಿಜಾಮ್ (33) ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
2023ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ನ್ಯಾಯಲಯದಲ್ಲಿ ವಿಚಾರಣೆಯಲ್ಲಿತ್ತು. ಆ ಸಂದರ್ಭ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದು ನಂತರ ಪ್ರಕರಣಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು ನ್ಯಾಯಾಲಯ ಈತನ ಮೇಲೆ 08 ಬಾರಿ ಬಂಧನ ವಾರಂಟ್ ಹೊರಡಿಸಿರುತ್ತದೆ. ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಪರಾಧ ವಿಭಾಗದ ಸಿಬ್ಬಂದಿಗಳು ಹಾಗೂ ವಾರಂಟ್ ಜ್ಯಾರಿ ಸಿಬ್ಬಂದಿಗಳು ಈತನನ್ನು ಆ.25ರಂದು ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಬಳಿಯ ವಲಾಲು ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಮೇರೆಗೆ ಆಪಾದಿತನ ವಿರುದ್ಧ ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿಲಾಗಿದೆ.
ಈತನ ಮೇಲೆ ಮಂಗಳೂರು ಪೂರ್ವ ಪೊಲೀಸ್ ಠಾಣೆ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣೆ, ಕುಶಾಲ ನಗರ ಗ್ರಾಮಾಂತರ ಪೊಲೀಸ್ ಠಾಣೆ,ಬರ್ಕೆ ಪೊಲೀಸ್ ಠಾಣೆ. ಪುತ್ತೂರು ನಗರ ಪೊಲೀಸ್ ಠಾಣೆ, ವಿಟ್ಲ ಠಾಣೆಯಲ್ಲಿ ಪ್ರಕರಣಗಳಿದ್ದು, ವಿಚಾರಣೆಯ ಹಂತದಲ್ಲಿದೆ ಎಂದು ಮಂಗಳೂರು ನಗರ ಪೊಲೀಸ್ ಪ್ರಕಟಣೆ ತಿಳಿಸಿದೆ.
OPTIC WORLD