ಇರಾ ಗ್ರಾಮದ ಕಂಚಿನಡ್ಕಪದವುನಲ್ಲಿ ಸುಮಾರು 5 ತಿಂಗಳ ಹಿಂದೆ ಮೇಯಲು ಬಿಟ್ಟ ದನವೊಂದನ್ನು ಕಳವು ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದು, ಬಂಧಿಸಿ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಮೂಡುಪೆರಾರ ಗ್ರಾಮದ ಗಂಜಿಮಠ ಮುಂಡೇವು ಮನೆ ನಿವಾಸಿ ಇರ್ಷಾದ್(35) ಆರೋಪಿ. ಆತ ಕಳೆದ ಮಾರ್ಚ್ 23ರಂದು ಕಂಚಿನಡ್ಕಪದವುನಲ್ಲಿ ಮೇಯಲು ಬಿಟ್ಟ ದನವನ್ನು ಕಳವು ಮಾಡಿದ್ದು, ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿ ಆರೋಪಿಯನ್ನು ಪತ್ತೆ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ, ಅರುಣ್ ಕೆ., ಅಡಿಶನಲ್ ಎಸ್‌ಪಿ ಅನಿಲ್‌ಕುಮಾರ್ ಭೂಮರೆಡ್ಡಿ ಹಾಗೂ ಬಂಟ್ವಾಳ ಡಿವೈಎಸ್‌ಪಿ ವಿಜಯಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಇನ್ಸ್‌ಪೆಕ್ಟರ್ ಶಿವಕುಮಾರ್ ಬಿ. ಅವರ ನೇತೃತ್ವದಲ್ಲಿ ಪಿಎಸ್‌ಐಗಳಾದ ಮಂಜುನಾಥ್ ಟಿ, ಕೃಷ್ಣಕಾಂತ್ ಪಾಟೀಲ್ ಕೆ. ಹಾಗೂ ಸಿಬಂದಿ ಪ್ರಶಾಂತ್, ಲೋಕೇಶ್, ಕೃಷ್ಣ ನಾಯ್ಕ್, ಮಾರುತಿ ಹಾಗೂ ಹಾಲೇಶಪ್ಪ ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು.