
ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಎಮ್.ಡಿ.ಎಂ.ಎ, ಹೈಡ್ರೋವಿಡ್ ಗಾಂಜಾ ಮತ್ತು ಎಮ್.ಡಿ.ಎಂ.ಎ ಪಿಲ್ಸ್ ಅನ್ನು ಸರಬರಾಜು ಮಾಡುತ್ತಿದ್ದ ಓರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 53.29 ಗ್ರಾಂ ಎಂಡಿಎಂಎ ಮತ್ತು 2.33 ಗ್ರಾಂ ಹೈಡ್ರೋವೀಡ್ ಗಾಂಜಾ ಮತ್ತು 0.45 ಗ್ರಾಂ MDMA PILLS ಅನ್ನು ವಶಪಡಿಸಿಕೊಂಡಿರುತ್ತಾರೆ.
ಮಂಗಳೂರು ನಗರಕ್ಕೆ ಬೆಂಗಳೂರು ನಗರದಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರಿಧಿಸಿಕೊಂಡು ಅದನ್ನು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ದೇರಳಕಟ್ಟೆಯ ಪರಿಸರದಲ್ಲಿ ನಿಂತುಕೊಂಡು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ಮಾದಕ ವಸ್ತುವನ್ನು ಪತ್ತೆ ಹಚ್ಚಿ ಕೇರಳ ಎರ್ನಾಕುಲಂ ಜಿಲ್ಲೆ ಕೊಚ್ಚಿ ಮಟ್ಟಂಚೆರಿಯ ಮಹಮ್ಮದ್ ಅರ್ಷದ್ ಖಾನ್ (29) ಎಂಬಾತನನ್ನು ಬಂಧಿಸಿದ್ದಾರೆ. ಆತ ಪ್ರಸ್ತುತ ದೇರಳಕಟ್ಟೆಯಲ್ಲಿ ವಾಸವಿದ್ದ. ಆತನ ವಶದಿಂದ ರೂ. 10.85,000/- ಮೌಲ್ಯದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಹೈಡ್ರೋವಿಡ್ ಗಾಂಜಾ, MDMA PILLS ಮತ್ತು ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್, ಸಹಿತ ಒಟ್ಟು ರೂ. 11,05,500 ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.


Be the first to comment on "Mangalore Crime News: ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಪ್ರತಿಷ್ಠಿತ ಕಾಲೇಜುಗಳಿಗೆ ಮಾದಕವಸ್ತುವನ್ನು ಸರಬರಾಜು ಮಾಡುತ್ತಿದ್ದ ಓರ್ವನ ಸೆರೆ"