


ನಗರ ಪ್ರದೇಶದ ಬಡ ಜನರ ಆರೋಗ್ಯ ಸಂಜೀವಿನಿಯಾಗಿ ನಮ್ಮ ಕ್ಲಿನಿಕ್ ಸೇವೆ ನೀಡಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು.
ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿ ಖಾಸಗಿ ಕಟ್ಟಡವೊಂದರಲ್ಲಿ ಆರಂಭಗೊಂಡ ನಮ್ಮ ಕ್ಲಿನಿಕ್ ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಸರಕಾರದ 15 ನೇ ಹಣಕಾಸಿನ ಪಿಎಂಎಚ್ ಐಎಂ ಯೋಜನೆಯಡಿ ಕ್ಲಿನಿಕ್ ಮಂಜೂರುಗೊಂಡಿದ್ದು, ನಗರ ಭಾಗದ ಜನರು ಇದರ ಉಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಬಂಟ್ವಾಳ ಪುರಸಭಾ ಅಧ್ಯಕ್ಷ ವಾಸು ಪೂಜಾರಿ, ಸದಸ್ಯರಾದ ಪುರುಷೋತ್ತಮ, ಮೀನಾಕ್ಷಿ ಗೌಡ, ಬಂಟ್ವಾಳ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಪುಷ್ಪಲತಾ, ಮಂಗಳೂರು ಆರ್.ಸಿ.ಎಚ್ ಅಧಿಕಾರಿ ಡಾ. ರಾಜೇಶ್, ಕೈಕಂಬ ಸಂಚಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಅಶ್ವಿನಿ, ತಾಲೂಕು ಆಸ್ಪತ್ರೆಯ ಅಧಿಕಾರಿ ಡಾ. ಅಶೋಕ್, ನಮ್ಮ ಕ್ಲಿನಿಕ್ ನ ವೈದ್ಯಾಧಿಕಾರಿ ಆಯಿಶತ್, ಕ್ಲಿನಿಕ್ ಕಟ್ಟಡದ ಮಾಲಕ ಜನಾರ್ದನ ಉಪಸ್ಥಿತರಿದ್ದರು


Be the first to comment on "Bantwal News: ಬಂಟ್ವಾಳದಲ್ಲಿ ನಮ್ಮ ಕ್ಲಿನಿಕ್ –ವೈದ್ಯಕೀಯ ಸೇವೆಗೆ ಶಾಸಕ ರಾಜೇಶ್ ನಾಯ್ಕ್ ಚಾಲನೆ"