

ದ.ಕ.ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಕೋಸ್ತಾ ಎಂ.ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಚ್.ವಿ.ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ಬಿಸಿರೋಡಿನ ಹೋಟೆಲ್ ಕೃಷ್ಣಿಮಾದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು.ಒಟ್ಟು ಆರು ತಾಲೂಕಿನ ವಕೀಲರ ಸಂಘದ ಪದಾಧಿಕಾರಿಗಳ ಸಮಾಲೋಚನೆ ಸಭೆಯಲ್ಲಿ ದ.ಕ.ಜಿಲ್ಲಾ ಅಸೋಸಿಯೇಷನ್ ರಚನೆಯ ಬಗ್ಗೆ ಚರ್ಚೆಯಾಗಿ ಒಮ್ಮತದ ಅಭಿಪ್ರಾಯ ಪಡೆದುಕೊಂಡ ಬಳಿಕ ನೂತನ ಸಂಘದ ಪದಾಧಿಕಾರಿಗಳ ನೇಮಕ ಮಾಡಲಾಗಿದೆ.
ದ.ಕ.ಜಿಲ್ಲಾ ಬಾರ್ ಅಸೋಸಿಯೇಷನ್ ಮೂಲಕ ಜಿಲ್ಲೆಯ ವಕೀಲರ ಬೇಕು ಬೇಡಗಳಿಗೆ ಸ್ಪಂದಿಸುವುದು ಹಾಗೂ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಮಾಡುವ ಉದ್ದೇಶದಿಂದ ರಚನೆ ಮಾಡುವುದರ ಬಗ್ಗೆ ಸಭೆ ನಿರ್ಣಯ ಮಾಡಿದ್ದಲ್ಲದೆ, ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತು ನೀಡುವ ಹೋರಾಟದಲ್ಲಿ ಸಕ್ರೀಯವಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಚರ್ಚಿಸಲಾಯಿತು. ದ.ಕ.ಜಿಲ್ಲಾ ಬಾರ್ ಅಸೋಸಿಯೇಷನ್ ಉಪಾಧ್ಯಕ್ಷರುಗಳಾಗಿ ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಚ್.ವಿ.ರಾಘವೇಂದ್ರ, ಸುಳ್ಯ ವಕೀಲರ ಸಂಘದ ಅಧ್ಯಕ್ಷ ಸುಕುಮಾರ್, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ ರೈ ಜಿ. ಮೂಡುಬಿದಿರೆ ವಕೀಲರ ಸಂಘದ ಅಧ್ಯಕ್ಷ ಹರೀಶ್ ಪಿ.ಯು. ಪ್ರಧಾನ ಕಾರ್ಯದರ್ಶಿಯಾಗಿ ಜಯಪ್ರಕಾಶ್ ಭಂಡಾರಿ ಮೂಡಬಿದರೆ, ಜೊತೆ ಕಾರ್ಯದರ್ಶಿಯಾಗಿ ನವೀನ್ ಬಿ.ಕೆ. ಬೆಳ್ತಂಗಡಿ ಕೋಶಾಧಿಕಾರಿಯಾಗಿ ಜೆಸಿಂತಾ ಕ್ರಾಸ್ತಾ ಬಂಟ್ವಾಳ, ಇವರ ಜೊತೆಗೆ ಜಿಲ್ಲೆಯ ವಕೀಲರ ಸಂಘದ ಎಲ್ಲಾ ಪದಾಧಿಕಾರಿಗಳು ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ.


Be the first to comment on "ದ.ಕ.ಜಿಲ್ಲಾ ಬಾರ್ ಅಸೋಸಿಯೇಶನ್ ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಆಯ್ಕೆ"