ಬಂಟ್ವಾಳ : ಪಾಣೆಮಂಗಳೂರು ಸಮೀಪದ ಗುಡ್ಡೆಅಂಗಡಿ ನೂರುದ್ದೀನ್ ಜುಮಾ ಮಸೀದಿಯಲ್ಲಿ ಲೋಕಾನುಗ್ರಹಿ ಮುಹಮ್ಮದ್ ಮುಸ್ತಫಾ (ಸ. ಅ) ರವರ ಜನ್ಮ ದಿನಾಚರಣೆಯ ಪ್ರಯುಕ್ತ ಬೃಹತ್ ಮೀಲಾದ್ ರ್ಯಾಲಿ ನಡೆಯಿತು.
ಉದ್ಘಾಟನೆಯನ್ನು ಖತೀಬ್ ಅಸೀಫ್ ದಾರಿಮಿ ನೆರವೇರಿಸಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದಿಕ್, ನೂರುದ್ದೀನ್ ಜುಮಾ ಮಸೀದಿಯ ಅಧ್ಯಕ್ಷ ಮೊಹಮ್ಮದ್ ಸಜೀಪ, ಕಾರ್ಯದರ್ಶಿ ಅಬೂಬಕ್ಕರ್ ಮೆಲ್ಕರ್, ಮೊಹಮ್ಮದ್ ಹನೀಫ್, ಮೊಹಮ್ಮದ್ ಸಿದ್ದಿಕ್, ಅಬ್ದುಲ್ ಮಜೀದ್ ಬೋಗೋಡಿ, ಇಸ್ಮಾಯಿಲ್ ಮುಸ್ಲಿಯಾರ್, ನಾಸಿರ್ ಅಸ್ಲಾಮಿ, ಅಬ್ದುರಹ್ಮಾನ್ ಮುಸ್ಲಿಯಾರ್, ಅನ್ಸಾರ್ ಬೋಗೋಡಿ, ಝಕಾರಿಯ ಬೋಗೋಡಿ, ಫಾರೂಕ್ ಎಬಿಸಿ ಮತ್ತಿತರರು ಉಪಸ್ಥಿತರಿದ್ದರು.