ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವೆ ಎಂಬ ಬೆದರಿಕೆ ಸಹಿತ ದೇಶದ ಹಲವು ವಿಮಾನ ನಿಲ್ದಾಣಗಳಿಗೆ ಬೆದರಿಕೆ ಹಾಕಿದ ತಮಿಳುನಾಡು ಮೂಲದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಕುರಿತು ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ರೆಡ್ಡಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ವಿವರ ಹೀಗಿದೆ
ಆಗಸ್ಟ್ 29ರಂದು ರಾತ್ರಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾನಕ್ಕೆ ಅನಾಮಿಕ ವ್ಯಕ್ತಿ ಫೋನ್ ಕರೆ ಮಾಡಿ ಟರ್ಮಿನಲ್ ಬಿಲ್ಡಿಂಗ್ ನ್ನು ಖಾಲಿ ಮಾಡಬೇಕು ಇಲ್ಲವಾದರೆ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿರುತ್ತಾನೆ. ಈ ಬಗ್ಗೆ ಡ್ಯೂಟಿ ಟರ್ಮಿನಲ್ ಮ್ಯಾನೇಜರ್, ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಮಂಗಳೂರು ಬಜಪೆ ಪೊಲೀಸ್ ಠಾಣೆಗೆ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಯಿತು. ಈ ವೇಳೆ ಬೆದರಿಕೆ ಕರೆ ಮಾಡಿದ ಆಪಾಧಿತ ತಮಿಳುನಾಡು ರಾಜ್ಯ ವೆಲ್ಲೂರು ಜಿಲ್ಲೆಯ ನಿವಾಸಿ ಸಸಿಕುಮಾರ್ (38) ಎಂಬಾತನನ್ನು ತಮಿಳುನಾಡು ರಾಜ್ಯ ವೆಲ್ಲೂರ್ ನಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಈ ಸಂದರ್ಭ, ಆಪಾಧಿತನು ದೇಶದ ಎಲ್ಲಾ ವಿಮಾನ ನಿಲ್ದಾನಗಳ ಮೊಬೈಲ್ ನಂಬ್ರವನ್ನು ಸಾಮಾಜಿಕ ಜಾಲತನದಲ್ಲಿ ಸರ್ಚ್ ಮಾಡಿ ಕರೆ ಮಾಡಿ ಬೆದರಿಕೆ ಹಾಕಿದ್ದು, ಅದೇ ತರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾನಕ್ಕೂ ಸಹ ಫೋನ್ ಮಾಡಿ ಟರ್ಮಿನಲ್ ಬಿಲ್ಡಿಂಗ್ ನ್ನು ಖಾಲಿ ಮಾಡಲು ತಿಳಿಸಿ ಖಾಲಿ ಮಾಡದೆ ಹೋದರೆ ಟರ್ಮಿನಲ್ ಬಿಲ್ಡಿಂಗ್ ನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ತಿಳಿಸಿರುತ್ತಾನೆ. ಆಪಾಧಿತನನ್ನು ದಸ್ತಗಿರಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುತ್ತಾನೆ.
Mangaluru Police have succeeded in arresting a Tamil Nadu-based man who had threatened to destroy the terminal building of the Mangaluru International Airport as well as several airports in the country.