ನರಿಕೊಂಬಿನ ಬೋರುಗುಡ್ಡೆಯಲ್ಲಿ ಮನೆಯೊಂದಕ್ಕೆ ಬೆಂಕಿ ತಗಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಬೋರುಗುಡ್ಡೆ ನಿವಾಸಿ ರಮೇಶ್ ಅವರ ಮನೆಗೆ ಬೆಂಕಿ ತಗಲಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ನಡೆದಿರುವ ಕುರಿತು ಸಂಶಯಿಸಲಾಗಿದೆ. ಮುಂಜಾನೆ 4ರ ಸುಮಾರಿಗೆ ಘಟನೆ ನಡೆದಿದ್ದು, ಮಲಗಿದ್ದ ಮನೆ ಮಂದಿ ಹೊರಬಂದು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಮನೆಯೊಳಗಿದ್ದ ವಿದ್ಯುತ್ ಪರಿಕರಗಳು, ಇತರ ಸೊತ್ತುಗಳು ಸಂಪೂರ್ಣ ಸುಟ್ಟು ಹೋಗಿದೆ. ಬಂಟ್ವಾಳ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದರು,
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…