ಬಂಟ್ವಾಳ: ಲೊರೆಟ್ಟೊ ಮಾತಾ ಚರ್ಚಿನಲ್ಲಿ ಕನ್ಯಾ ಮಾತೆಯ ಹುಟ್ಟುಹಬ್ಬದ ದಿನವಾದ (ಮೊಂತಿ ಫೆಸ್ತ್ ) ತೆನೆಹಬ್ಬವನ್ನು ಭಕ್ತಿ ಪೂರ್ವಕವಾಗಿ ವಿಜೃಂಭಣೆಯಿಂದ ಆಚರಿಸಲಾಯಿತು.
ಚರ್ಚ್ ಧರ್ಮಗುರುಗಳಾದ ವಂ ಫ್ರಾನ್ಸಿಸ್ ಕ್ರಾಸ್ತ , ಲೋರೆಟ್ಟೋ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ವಂ. ಜೇಸನ್ ಮೋನಿಸ್, ಪ್ರಧಾನ ಧರ್ಮಗುರುಗಳಾಗಿ ಸಂತ ಜೋಸೆಫರ ಸೆಮಿನರಿ, ಜೆಪ್ಪು ಅಧ್ಯಾತ್ಮಿಕ ನಿರ್ದೇಶಕರಾದ ವಂ
ಹ್ಯಾರಿ ಡಿಸೋಜ, ಇಟಲಿ ಧರ್ಮ ಪ್ರಾಂತ್ಯದಲ್ಲಿ ಸೇವೆ ನೀಡುತ್ತಿರುವ ವಂ ರೊಯ್ಸ್ಟನ್ ಡಿಸೋಜ ಬಲಿಪೂಜೆ ಅರ್ಪಿಸಿದರು. ಪ್ರಧಾನ ಧರ್ಮಗುರುಗಳು ದೇವರವಾಕ್ಯದ ಸಂದೇಶದಲ್ಲಿ ಹೆಣ್ಣು ಮಕ್ಕಳು ಹಾಗೂ ಮಾತೆ ಮರಿಯಮ್ಮನವರ ತ್ಯಾಗಮಯ ಜೀವನದ ಬಗ್ಗೆ ಪ್ರವಚನ ನೀಡಿದರು. ಕನ್ಯಾಮಾತೆಯ ಪಲ್ಲಕ್ಕಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು.ಬಲಿ ಪೂಜೆಯಲ್ಲಿ ಭಕ್ತಾದಿಗಳು ಭಕ್ತಿಯಿಂದ ಎಲ್ಲಾರೂ ಪಾಲ್ಗೊಳ್ಳಲು ಚರ್ಚ್ ವಠಾರದಲ್ಲಿ ಎಲ್ ಇ ಡಿ ಪರದೆಯನ್ನು ಅಳವಡಿಸಲಾಗಿತ್ತು. ಕಳೆದ 9 ದಿನಗಳಿಂದ ನಡೆದ ಮಾತೆ ಮರಿಯಮ್ಮನವರ ನೋವೆನಾ ಪ್ರಾರ್ಥನೆಗೆ ಮಕ್ಕಳು ಹೂಗಳನ್ನು ಅರ್ಪಿಸಿದರು ಹಾಗೂ ಸಂಭ್ರಮಕ್ಕೆ ಸಹಕರಿಸಿದ ಎಲ್ಲರಿಗೂ ತೆನೆಯನ್ನು ನೀಡಿ ಗೌರವಿಸಲಾಯಿತು. ಮಾತೆ ಮರಿಯಮ್ಮನವರ ಪಲ್ಲಕ್ಕಿಯನ್ನು ಹೂಗಳಿಂದ ಶೃಂಗರಿಸಲಾಗಿತ್ತು. ಚರ್ಚ್ ಪಾಲನಾ ಮಂಡಳಿ ನೇತೃತ್ವ ವಹಿಸಿದ್ದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…