ಕಲ್ಲಡ್ಕ

ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರತಾಪ ಕ್ರೀಡಾ ಸಂಘದ ವತಿಯಿಂದ ದಿನಾಂಕ ಅಮ್ಟೂರಿನ ಬಾಳಿಕೆ ಗದ್ದೆಯಲ್ಲಿ ಕೆಸರುಗದ್ದೆ ಕ್ರೀಡಾಕೂಟ ನಡೆಯಿತು.

ಜಾಹೀರಾತು

ಶ್ರೀರಾಮ ವಿದ್ಯಾಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾಲೇಜು ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರಕಟ್ಟೆ ಅಧ್ಯಕ್ಷತೆಯನ್ನು ವಹಿಸಿ, ಹಾಕಿ ಆಟಗಾರ ಧ್ಯಾನ್ ಚಂದ್ ಅವರ ಹೆಸರಿನಲ್ಲಿ ಈ ಕ್ರೀಡಾಕೂಟ ನಡೆಯುತ್ತಿದ್ದು, ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿಗಳಿಂದಲೇ ಆಯೋಜಿಸಲಾದ ಮೊದಲ ಕೆಸರುಗದ್ದೆ ಇದಾಗಿದೆ ಎಂದರು.

ಮಂತ್ರದೇವತೆ ಸಾನ್ನಿಧ್ಯ ಕಟ್ಟೆಮಾರ್ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅತಿಥಿಗಳು ಭೂಮಾತೆಗೆ ಹಾಲೆರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು.

ಈ ಸಂದರ್ಭ ವಿದ್ಯಾಕೇಂದ್ರದ ಆಡಳಿತ ಮಂಡಳಿ ಸದಸ್ಯೆ ಲಕ್ಷ್ಮೀ ರಘುರಾಜ್ ಇವರು  ಪ್ರತಾಪ ಕ್ರೀಡಾಸಂಘದ ಲೋಗೋ ಬಿಡುಗಡೆ ಮಾಡಿದರು. ರಾಷ್ಟ್ರಸೇವಿಕಾ ಸಮಿತಿಯ ಹಿರಿಯ ಮಾರ್ಗದರ್ಶಕರಾದ ಡಾ. ಕಮಲಾ ಪ್ರಭಾಕರ ಭಟ್ ಉಪಸ್ಥಿತರಿದ್ದು ಶುಭ ಹಾರೈಸಿದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು, ಬಿಜೆಪಿ ರೈತ ಮೋರ್ಚಾ ಬಂಟ್ವಾಳ ತಾಲೂಕು ಉಪಾಧ್ಯಕ್ಷ ಪ್ರಭಾಕರ ಶೆಟ್ಟಿ, ಬಿಜೆಪಿ ಯುವಮೋರ್ಚಾ ಬಂಟ್ವಾಳ ತಾಲೂಕು ಕಾರ್ಯದರ್ಶಿ ಕೌಶಿಲ್ ಶೆಟ್ಟಿ ಬಾಳಿಕೆ, ಜಯಂತ್ ರೈ ಬಾಳಿಕೆ, ಉದ್ಯಮಿ ಅಜಯ್ ಪಡೀಲ್, ಪು?ರಾಜ್ ಕಲ್ಲಡ್ಕ, ಜಯಂತ್ ರೈ, ಉದ್ಯಮಿ  ಮಧುಕೃಷ್ಣ ಸೋಮಯಾಜಿ, ಶ್ರೀರಾಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಗೋಪಾಲ್, ಕುಶಾಲಪ್ಪ ಅಮ್ಟೂರು ಉಪಸ್ಥಿತರಿದ್ದರು. ಉಪಪ್ರಾಂಶುಪಾಲ ಯತಿರಾಜ್ ಪೆರಾಜೆ  ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಗಣ್ಯರನ್ನು ಸ್ವಾಗತಿಸಿದರು.  ಬಿಸಿಎ ವಿದ್ಯಾರ್ಥಿನಿ ಅಶ್ವಿನಿ ವಂದಿಸಿ, ಬಿಸಿಎ ವಿದ್ಯಾರ್ಥಿ ಜಯಸೂರ್ಯ ಕಾರ್ಯಕ್ರಮ ನಿರ್ವಹಿಸಿದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts