ಬಂಟ್ವಾಳ: ಜೇಸಿ ಸಪ್ತಾಹದ ಎರಡನೇ ದಿನದ ಕಾರ್ಯಕ್ರಮವಾಗಿ ಜೇಸಿಐ ಜೋಡುಮಾರ್ಗ ನೇತ್ರಾವತಿ ವತಿಯಿಂದ ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ನಲ್ಲಿ ಜೀವನ ಕೌಶಲ್ಯಗಳು ಎಂಬ ಕಾರ್ಯಾಗಾರವನ್ನು ಜೇಸಿ ರಾಷ್ಟ್ರೀಯ ತರಬೇತುದಾರ ವಿಕ್ರಮ್ ನಾಯಕ್ ಕೆ ನೆರವೇರಿಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಪಾಲಿಟೆಕ್ನಿಕ್ ಬಂಟ್ವಾಳ ಪ್ರಿನ್ಸಿಪಾಲ್ ನರಸಿಂಹ ಭಟ್ ಎಚ್ ವಹಿಸಿದ್ದರು. ಪೂರ್ವಾಧ್ಯಕ್ಷರಾದ ಗಾಯತ್ರಿ ಲೋಕೇಶ್ , ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಭಾಸ್ಕರ ಎಲ್. ಮತ್ತಿತರರು ಉಪಸ್ಥಿತರಿದ್ದರು.