ಬಂಟ್ವಾಳ: ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದಲ್ಲಿರುವ ಕಶೆಕೋಡಿ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಸೆ.22ರಿಂದ ಅಕ್ಟೋಬರ್ 1ರವರೆಗೆ ನಡೆಯಲಿದೆ. ಬ್ರಹ್ಮಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ಸೆ.28ರಂದು ಭಾನುವಾರ ನವಚಂಡಿಕಾಯಾಗ ನಡೆಯಲಿರುವುದು ಎಂದು ಪ್ರಕಟಣೆ ತಿಳಿಸಿದೆ.ದೇವಾಲಯವು 300 ವರ್ಷಗಳ ಇತಿಹಾಸವನ್ನು ಹೊಂದಿದ್ದು, ಶರನ್ನವರಾತ್ರಿ ಹಿನ್ನೆಲೆ ಪ್ರತಿದಿನ ವಿಶೇಷ ಪೂಜಾ ಕಾರ್ಯಕ್ರಮಗಳು ಇರುತ್ತವೆ.