ದ. ಕ ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲ ನಿ. ಬಿ.ಸಿರೋಡ್ 2024-2025ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಬಿ.ಸಿ.ರೋಡಿನ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ಜರಗಿತು.ಮಹಾಮಂಡಲದ ಅಧ್ಯಕ್ಷ ಕೆ ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಿ ವಾರ್ಷಿಕ ವರದಿಯನ್ನು ಮಂಡಿಸಿ ಮಹಾಮಂಡಲವು 10.ಕೋಟಿ ರೂ ಠೇವಣಿ ಸಂಗ್ರಹಿಸಿದ್ದು 5.50 ಕೋಟಿ ಸಾಲ ನೀಡಿದ್ದು 5 ಕೋಟಿ ರೂ ಹೂಡಿಕೆ ಮಾಡಿದ್ದು ಪ್ರಸ್ತುತ ಸಾಲಿನಲ್ಲಿ 10.28 ಲಕ್ಷ ರೂ ನಿವ್ವಳ ಲಾಭಗಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 31 ಮೂರ್ತೆದಾರರ ಸಹಕಾರಿ ಸಂಘಗಳು ಇದ್ದು ಇದರಲ್ಲಿ ಈಗಾಗಲೇ 18 ಪ್ರಾಥಮಿಕ ಮೂರ್ತೆದಾರರ ಸಹಕಾರಿ ಸಂಘಗಳು ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ತೊಡಗಿದ್ದು ಸುಮಾರು 1000 ಕೋಟಿ ರೂ ವ್ಯವಹಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿದೆ ಎಂದರು..
ದಕ್ಷಿಣ ಕನ್ನಡ ಜಿಲ್ಲಾ ಮೂರ್ತೆದಾರರ ಮಹಾಮಂಡಲದ ವತಿಯಿಂದ ನೀಡುವ ಅತುತ್ತಮ ಮೂರ್ತೆದಾರರ ಸಹಕಾರಿ ಸಂಘ ಪ್ರಶಸ್ತಿಯನ್ನು ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಹಾಗೂ ಅಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘಗಳಿಗೆ ನೀಡಿ ಸನ್ಮಾನಿಸಲಾಯಿತು.ಆಗಮಿಸಿದ ಎಲ್ಲಾ ಪ್ರಾಥಮಿಕ ಮೂರ್ತೆದಾರರ ಸೇವಾ ಸಹಕಾರಿ ಸಂಘಗಳಿಗೆ ಗೌರವ ಸ್ಮರಣಿಕೆ ನೀಡಿ ಗೌರವಿಸಲಾಯಿತು.ಉಪಾಧ್ಯಕರಾದ ರಾಜೇಶ್ ಸುವರ್ಣ, ನಿರ್ದೇಶಕರಾದ ವಿಜಯ ಕುಮಾರ್ ಸೊರಕೆ, ಆರ್. ಸಿ. ನಾರಾಯಣ್ ರೆಂಜ, ಪುರುಷ ಎನ್ ಸಾಲಿಯಾನ್, ಅಣ್ಣಿ ಯಾನೆ ನೊಣಯ್ಯ, ವಿಶ್ವನಾಥ ಪೂಜಾರಿ ಪಂಜ, ಬೇಬಿ ಕುಂದರ್, ವಿಶ್ವನಾಥ ಬಿ. ಶಿವಪ್ಪ ಸುವರ್ಣ, ಪದ್ಮನಾಭ ಕೋಟ್ಯಾನ್, ಹರೀಶ್ ಸುವರ್ಣ, ಗಣೇಶ್ ಪೂಜಾರಿ, ಉಪಸ್ಥಿತರಿದ್ದರು.ನಿರ್ದೇಶಕರಾದ ಉಷಾ ಅಂಚನ್ ಸ್ವಾಗತಿಸಿ, ಸಿಇಓ ಕಿಶೋರ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.ಶೈಲಜಾ ಕೆ ವಂದಿಸಿದರು