ಬೋಳಂತೂರಿನ ಶ್ರೀ ಸಿದ್ದಿವಿನಾಯಕ ಭಜನಾ ಮಂಡಳಿ ತುಳಸೀವನ ತಂಡಕ್ಕೆ ತಾಲೂಕಿನ ಶ್ರೇಷ್ಠ ಭಜನಾ ಮಂಡಳಿ ಸಾಧಕ ಪ್ರಶಸ್ತಿ ದೊರಕಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ನಡೆಯುತ್ತಿರುವ 27ನೇ ಭಜನಾ ತರಬೇತಿ ಕಮ್ಮಟದಲ್ಲಿ ಶ್ರೀ ಸಿದ್ದಿವಿನಾಯಕ ಭಜನಾ ಮಂಡಳಿ ತುಳಸೀವನ, ಬೋಳಂತೂರು ತಂಡ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ತಾಲೂಕಿನ ಶ್ರೇಷ್ಠ ಭಜನಾ ಮಂಡಳಿ ಪುರಸ್ಕಾರ ಸಾಧಕ ಪ್ರಶಸ್ತಿಯನ್ನು ಪಡೆದುಕೊಂಡಿತು.


ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ಹೆಗ್ಗಡೆ ದಂಪತಿ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ, ಹರ್ಷೇಂದ್ರ ಹೆಗ್ಗಡೆ ದಂಪತಿ, ಭಜನಾ ಪರಿಷತ್ ರಾಜ್ಯ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್, ಜಿಲ್ಲಾಧ್ಯಕ್ಷ ಚಂದ್ರಶೇಖರ್ ಸಾಲಿಯನ್ ಉಪಾಧ್ಯಕ್ಷ ರಾಜೇಂದ್ರ ಬಸ್ರೂರು, ಜಿಲ್ಲಾ ಭಜನಾ ಪರಿಷತ್ ಸಮನ್ವಯ ಅಧಿಕಾರಿ ಸಂತೋಷ್ ಅಳಿಯೂರು, ಬೋಳಂತೂರು ಭಜನಾ ಮಂಡಳಿ ಅಧ್ಯಕ್ಷ ಜಯರಾಮ ರೈ, ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.



Be the first to comment on "ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿಗೆ ಪ್ರಶಸ್ತಿ"