

ಬಂಟ್ವಾಳ ಪುರಸಭೆಯ ವತಿಯಿಂದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ಎಸ್ ವಿ ಎಸ್ ದೇವಳ ಶಾಲಾ ಕ್ರೀಡಾಂಗಣದಲ್ಲಿ ಪೌರಕಾರ್ಮಿಕರ ಕ್ರೀಡಾಕೂಟ ನಡೆಯಿತು. ಅಪರಾಹ್ನ ನಡೆದ ಸಭಾ ಕಾರ್ಯಕ್ರಮದಲ್ಲಿ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪೌರಕಾರ್ಮಿಕರಿಗೆ ಆರೋಗ್ಯ ವಿಮೆ ಸೌಲಭ್ಯ ಮತ್ತು ನೇರ ಪಾವತಿ ಪೌರಕಾರ್ಮಿಕರಿಗೆ ಸಮವಸ್ತ್ರ ವಿತರಿಸಲಾಯಿತು

ಪುರಸಭಾ ಅಧ್ಯಕ್ಷ ಬಿ.ವಾಸು ಪೂಜಾರಿ ಲೊರೆಟ್ಟೊ ಅಧ್ಯಕ್ಷತೆ ವಹಿಸಿ ಮಾತನಾಡಿ, ಪೌರಕಾರ್ಮಿಕರು ಪ್ರತಿ ದಿನ ಬೆಳಿಗ್ಗೆ ಪುರಸಭಾ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವ ಸ್ವಚ್ಛತಾ ಸೇನಾನಿಗಳಾಗಿದ್ದು, ಅವರ ಸೇವೆಯು ಶ್ಲಾಘನೀಯ, ಇವರಿಂದ ನಾಗರಿಕರ ಆರೋಗ್ಯ ಕಾಪಾಡುವ ಕಾರ್ಯ ಆಗುತ್ತಿದೆ, ಸಾರ್ವಜನಿಕರು ಪೌರಕಾರ್ಮಿಕರೊಂದಿಗೆ ಕೈ ಜೋಡಿಸಬೇಕು ಎಂದು ಈ ಸಂದರ್ಭ ತಿಳಿಸಿದರು.

ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯರಾದ ರಾಮಕೃಷ್ಣ ಆಳ್ವ ಮಹಮ್ಮದ್ ಶರೀಫ್, ಸದಸ್ಯರಾದ ಅಬುಬಕ್ಕರ್ ಸಿದ್ದಿಕ್, ಪುರುಷೋತ್ತಮ್, ಶಶಿಕಲಾ ಮತ್ತು ನಾಮನಿರ್ದೇಶಿತ ಸದಸ್ಯ ಜಗದೀಶ್ ಕುಂದರ್, ಪುರಸಭಾ ಮುಖ್ಯಾಧಿಕಾರಿ ಮತ್ತಡಿ, ಅಧಿಕಾರಿಗಳಾದ ರಝಾಕ್, ಉಮಾವತಿ ಉಪಸ್ಥಿತರಿದ್ದು ಹಾರೈಸಿದರು



Be the first to comment on "Bantwal: ಬಂಟ್ವಾಳ ಪುರಸಭೆ ವತಿಯಿಂದ ಪೌರಕಾರ್ಮಿಕರ ದಿನಾಚರಣೆ"