ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಸಾಕುನಾಯಿ ಹಾಗೂ ಬೆಕ್ಕುಗಳಿಗೆ ಉಚಿತ ರೇಬಿಸ್ ಲಸಿಕಾ ಕಾರ್ಯಕ್ರಮವನ್ನು ಸೆ.28ರಂದು ಭಾನುವಾರ ಬಿ.ಸಿ.ರೋಡಿನ ಗೂಡಿನಬಳಿ ಸಮೀಪವಿರುವ ಪಶು ಆಸ್ಪತ್ರೆಯಲ್ಲಿ ನಡೆಯಲಿದೆ.
ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ತಮ್ಮ ಸಾಕುನಾಯಿಗಳಿಗೆ ಹಾಗೂ ಬೆಕ್ಕುಗಳಿಗೆ ಲಸಿಕೆಯನ್ನು ಹಾಕಿಸುವ ಮೂಲಕ ಕಾರ್ಯಕ್ರಮ ಸದುಪಯೋಗಪಡೆಯುವಂತೆ ತಾಲೂಕು ಪಶುವೈದ್ಯಾಧಿಕಾರಿ ಉಮೇಶ್ ಕಿರಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.