ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಾಲ್ಕು ದಶಕಗಳಿಗೂ ಅಧಿಕ ಕರ್ತವ್ಯ ಸಲ್ಲಿಸಿ ನಿವೃತ್ತಿ ಹೊಂದಿದ ಯಶೋದರ ಶೆಟ್ಟಿಗಾರ್ ಅವರನ್ನು ಅಧ್ಯಕ್ಷ ಪ್ರಭಾಕರ ಪ್ರಭು ಸನ್ಮಾನಿಸಿದರು. ಸಂಘದ ಉಪಾಧ್ಯಕ್ಷರಾದ ಸಂದೇಶ ಶೆಟ್ಟಿ, ನಿರ್ದೇಶಕರಾದ ಸತೀಶ್ ಪೂಜಾರಿ, ರಶ್ಮಿತ್ ಶೆಟ್ಟಿ,ದಿನೇಶ್ ಪೂಜಾರಿ, ಚಂದ್ರಶೇಖರ ಶೆಟ್ಟಿ , ವೀರಪ್ಪ ಪರವ, ಜಾರಪ್ಪ ನಾಯ್ಕ, ಶಿವ ಗೌಡ, ವಿಶ್ವನಾಥ ಶೆಟ್ಟಿಗಾರ್, ಮಂದರಾತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್ ಆರ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ಶೆಟ್ಟಿ , ನವೀನ್ ಹೆಗ್ಡೆ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು.