ಕಲ್ಲಡ್ಕದ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರಜ್ಞಾನ ಸಾಹಿತ್ಯ ಸಂಘ ಮತ್ತು ಕನ್ನಡ ಭಾಷಾ ವಿಭಾಗದ ವತಿಯಿಂದ ಹಿರಿಯ ಸಾಹಿತಿ ಡಾ. ಎಸ್ ಎಲ್ ಭೈರಪ್ಪನವರ ನಿಧನದ ಪ್ರಯುಕ್ತ ನುಡಿನಮನ ಕಾರ್ಯಕ್ರಮ ನಡೆಯಿತು.
ಕಾಲೇಜು ಪ್ರಿನ್ಸಿಪಾಲ್ ಕೃಷ್ಣಪ್ರಸಾದ್ ಕಾಯರಕಟ್ಟೆ ಡಾ. ಭೈರಪ್ಪ ಕುರಿತು ಮಾತನಾಡುತ್ತಾ ಅವರ ಸಾಧನೆಯ ವಿಚಾರಗಳನ್ನು ತಿಳಿಸಿ ನುಡಿನಮನ ಸಲ್ಲಿಸಿದರು. ಮೌನ ಪ್ರಾರ್ಥನೆಯೊಂದಿಗೆ ಅಗಲಿದ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಾಹಿತ್ಯ ಸಂಘದ ನಿರ್ದೇಶಕಿ ಅನನ್ಯಾ, ಸಹನಿರ್ದೇಶಕಿ ಪ್ರಸನ್ನಾ ಉಪಸ್ಥಿತರಿದ್ದರು. ಪ್ರಸನ್ನಾ ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜು ಪ್ರವೇಶ ದ್ವಾರದಲ್ಲಿ ಡಾ. ಎಸ್ ಎಲ್ ಭೈರಪ್ಪನವರ ಕೃತಿಗಳ ಪ್ರದರ್ಶಿನಿಯನ್ನು ಏರ್ಪಡಿಸಲಾಗಿತ್ತು.