ಬಂಟ್ವಾಳ ಪುರಸಭಾ ಕಚೇರಿಯಲ್ಲಿ ಗಾಂಧೀ ಜಯಂತಿ ಆಚರಣೆ ನಡೆಯಿತು. ಅಧ್ಯಕ್ಷ ಬಿ.ವಾಸು ಪೂಜಾರಿ ಲೊರೆಟ್ಟೊ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಾತ್ಮ ಗಾಂಧೀಜಿ ಅವರ ಕನಸನ್ನು ನನಸು ಮಾಡುವ ಮೂಲಕ ಭಾರತ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಸರ್ಕಾರಿ ನೌಕರರು ಕೈಜೋಡಿಸಬೇಕು ಎಂದರು.ಈ ಸಂದರ್ಭ ಆರೋಗ್ಯಾಧಿಕಾರಿ ರತ್ನಪ್ರಸಾದ್, ಸಿಬ್ಬಂದಿಗಳಾದ ರಝಾಕ್, ಮತ್ತಿತರರು ಉಪಸ್ಥಿತರಿದ್ದರು.