ಬಂಟ್ವಾಳ ತಾಲೂಕಿನ ವಿವಿಧೆಡೆಗಳಲ್ಲಿ ನಡೆಯುವ ಕಬಡ್ಡಿ ಪಂದ್ಯಾಟಗಳಿಗೆ ತಡರಾತ್ರಿ ತನಕ ಅನುಮತಿ ನೀಡದಂತೆ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಬಂಟ್ವಾಳ ತಾಲೂಕು ಅಮೆಚೂರ್ ಕಬ್ಬಡ್ಡಿ ಅಸೋಸಿಯೇಷನ್ ಮತ್ತು ಕಬಡ್ಡಿ ತೀರ್ಪುಗಾರರ ಮಂಡಳಿಯ ವತಿಯಿಂದ ಮನವಿಯನ್ನು ನೀಡಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನವಿಗೆ ಸಕರತ್ಮಾಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಪ್ರತಿ ಠಾಣೆಗಳಿಗೂ ಕೂಡಲೇ ಸ್ಪಷ್ಟ ಸೂಚನೆ ನೀಡುವುದಾಗಿ ತಿಳಿಸಿದ್ದಾರೆ.
ಬಳಿಕ ಬಂಟ್ವಾಳ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮತ್ತು ತೀರ್ಪು ಗಾರ ಮಂಡಳಿಯ ನಿಯೋಗ ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಪೂಂಜಾಲಕಟ್ಟೆ, ವಿಟ್ಲ ಪೋಲಿಸ್ ಠಾಣೆಗಳಿಗೂ ತೆರಳಿ ಮನವಿ ಸಲ್ಲಿಸಿದರು. ತಡರಾತ್ರಿ ತನಕದ ಪಂದ್ಯಾಟಗಳಿಂದ ಕ್ರೀಡಾಪಟುಗಳಿಗೆ ಆಗುವ ತೊಂದರೆ, ಪಂದ್ಯಾಟದ ವೇಳೆ ನಡೆಯುವ ಅಹಿತಕರ ಘಟನೆಗಳ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗೆ ಹಾಗೂ ಠಾಣಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಅಮೆಚೂರ್ ಕಬ್ಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಪುಷ್ಪರಾಜ್ ಚೌಟ, ಬಂಟ್ವಾಳ ತಾಲೂಕು ಅಮೆಚೂರ್ ಕಬ್ಬಡ್ಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿ ಅಧ್ಯಕ್ಷ ಸುರೇಶ್ ಮೈರಡ್ಕ, ಸಂಚಾಲಕ ಹಬೀಬ್ ಮಾಣಿ, ಸದಸ್ಯರಾದ ದೀಪಕ್ ಪೆರಾಜೆ ಹಾಗೂ ಸಿದ್ದಿಕ್ ಕುಕ್ಕಾಜೆ ಉಪಸ್ಥಿತರಿದ್ದರು.