ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಅಕ್ಟೋಬರ್ 8ರಿಂದ 12ರವರೆಗೆ ಹಗಲು ಹೊತ್ತಿನಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಬಂಟ್ವಾಳ ನದಿ ಕಿನಾರೆಯ ಜ್ಯಾಕ್ ವೆಲ್ನಲ್ಲಿ ಕೆಸರು ಮತ್ತು ಮರಳು ತೆಗೆಯುವ ಕಾಮಗಾರಿ ಇರುವುದರಿಂದ, ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಹಗಲು ಹೊತ್ತಿನಲ್ಲಿ ಬೆಳ್ಳಗೆ 8ರಿಂದ ಸಂಜೆ 6ರವರೆಗೆ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಾಯ ಉಂಟಾಗುತ್ತದೆ. ಈ ಬಗ್ಗೆ ಸಾರ್ವಜನಿಕರು ಸಹಕರಿಸುವಂತೆ ಈ ಮೂಲಕ ತಿಳಿಯಪಡಿಸಲಾಗಿದೆ ಎಂದು ಪ್ರಕಟಣೆ ಹೇಳಿದೆ.