ಬಿಎಂಎಸ್ ಸಂಯೋಜಿತ ಬಂಟ್ವಾಳ ರಿಕ್ಷಾ ಚಾಲಕ ಮಾಲೀಕರ ಸಂಘದ 37ನೇ ವಾರ್ಷಿಕ ಮಹಾಸಭೆ ಬಂಟ್ವಾಳದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು.ರಿಕ್ಷಾ ಚಾಲಕ ಮಾಲಕರ ಬಂಟ್ವಾಳ ತಾಲೂಕು ಅಧ್ಯಕ್ಷ ವಿಶ್ವನಾಥ ಚೆಂಡ್ತಿಮಾರ್ ಸಭಾಧ್ಯಕ್ಷತೆ ವಹಿಸಿದ್ದರು.
ಮೋಟಾರು ಮತ್ತು ಜನರಲ್ ಮಜ್ದೂರು ಸಂಘ ಜಿಲ್ಲಾಧ್ಯಕ್ಷ ವಿಶ್ವನಾಥ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರದಿಂದ ಬರುವ ಸೌಲಭ್ಯಗಳು ಮತ್ತು ಹಕ್ಕುಗಳು ತಲುಪುವಂತೆ ಮಾಡಲು ಸಂಘಟಿತ ಶಕ್ತಿ ಅಗತ್ಯ. ಸಂಘಟನೆಯ ಬಲವೇ ಕಾರ್ಮಿಕರ ಗೌರವವನ್ನು ಕಾಪಾಡುವ ಶಕ್ತಿ ಎಂದರು.
ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ಮಾತನಾಡಿ,ಬಂಟ್ವಾಳ ಘಟಕ 37 ವರ್ಷಗಳಿಂದ ಶಿಸ್ತಿನೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಬಿಎಂಎಸ್ ಕಾರ್ಮಿಕರ ಧ್ವನಿಯನ್ನು ಸರ್ಕಾರದ ಕಿವಿಗೆ ತಲುಪಿಸುವ ಪ್ರಮುಖ ವೇದಿಕೆ. ಆಟೊ ಚಾಲಕರು ಸಮಾಜದ ಆರ್ಥಿಕ ಚಟುವಟಿಕೆಯ ನಾಭಿ. ಅವರ ಶ್ರಮವಿಲ್ಲದೆ ನಗರ ಜೀವನ ಅಸಾಧ್ಯ ಬಂಟ್ವಾಳ ಘಟಕವು ಕಲ್ಲು ಮರಳಿನ ಕೊರತೆಯಿಂದ ಬಳಲುತ್ತಿರುವ ಕಾರ್ಮಿಕರ ಮತ್ತು ಇತರ ಕಾರ್ಮಿಕರ ಪರವಾಗಿ ಪ್ರಾಮಾಣಿಕವಾಗಿ ಧ್ವನಿ ಎತ್ತಿದೆ. ಇದೇ ರೀತಿಯಲ್ಲಿ ಸಂಘಟನೆಯ ಮೂಲಕ ಸಾಮಾಜಿಕ ಜವಾಬ್ದಾರಿಯ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸಬೇಕು ಎಂದರು.
ಸಂಘದ ಕಾನೂನು ಸಲಹೆಗಾರ ನ್ಯಾಯವಾದಿ ಜಯರಾಮ್ ರೈ ಮಾತನಾಡಿ, ಸಂಘಟನೆಯ ಸೇವಾ ಮನೋಭಾವ ಮತ್ತು ಶಿಸ್ತುಪೂರ್ಣ ಕಾರ್ಯವೈಖರಿಯನ್ನು ಶ್ಲಾಘಿಸಿದರು.
ಭಾರತೀಯ ಮಜ್ದೂರು ಸಂಘದ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ, ಭಾರತೀಯ ಮಜ್ದೂರು ಸಂಘ ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್ ಮಣಿಹಳ್ಳ, ಮೋಟಾರು ಮತ್ತು ಜನರಲ್ ಮಜ್ದೂರ್ ಸಂಘದ ಉಪಾಧ್ಯಕ್ಷ ನಾರಾಯಣ ಪೂಜಾರಿ ಉಪಸ್ಥಿತರಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಾ ಕೃಷ್ಣ ಅವರು ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ನಾರಾಯಣ ಪೂಜಾರಿ, ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ರಿಕ್ಷಾ ಚಾಲಕರಿಗೆ ಆರ್ಥಿಕ ಸಹಾಯ ಮಾಡಲಾಯಿತು.ತಾಲೂಕು ಕಾರ್ಯದರ್ಶಿ ಶ್ರೀಕಾಂತ್ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ದಿನೇಶ್ ಎನ್.ಸಿ.ರೋಡ್ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದ ಸಮಗ್ರ ನಿರ್ವಹಣೆಯನ್ನು ಉಮಾಶಂಕರ್ ನೆರವೇರಿಸಿದರು.