ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬಿ.ಸಿ.ರೋಡ್ ಮಿನಿ ವಿಧಾನಸೌಧದ ಮುಂಭಾಗ ಯುವ ಕಾಂಗ್ರೆಸ್ ಬಂಟ್ವಾಳ ಆಯೋಜಿಸಿರುವ ಮತಗಳ್ಳತನದ ವಿರುದ್ಧ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಪಂಜಿನ ಬೃಹತ್ ಮೆರವಣಿಗೆ ಅಕ್ಟೋಬರ್ 10ರಂದು ನಡೆಯಲಿದೆ. ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರದಿಂದ ನಾರಾಐಣಗುರು ಸರ್ಕಲ್ ವ ರೆಗೆ ಸಾಗಿ, ನಂತರ ಬಿ.ಸಿ.ರೋಡ್ ಮಿನಿ ವಿಧಾನಸೌಧದ ಎದುರು ಸಾರ್ವಜನಿಕ ಸಭೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಸಚಿವ ಸಂತೋಷ್ ಲಾಡ್ ಆಗಮಿಸಲಿದ್ದಾರೆ ಎಂದು ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.