ಬಂಟ್ವಾಳ

ಸತ್ಯ ಹೇಳಲು ಹೊರಟ ರಾಹುಲ್ ಗಾಂಧಿ ಜೊತೆ ನಿಲ್ಲಬೇಕು: ಸಂತೋಷ್ ಲಾಡ್

ಜಾಹೀರಾತು

ರಾಹುಲ್ ಗಾಂಧಿ ಸತ್ಯ ಹೇಳಲು ಹೊರಟಿದ್ದಾರೆ. ಅವರು ಜನರ ಬಳಿಗೆ ಬಂದು ಸಮಸ್ಯೆ ಆಲಿಸುತ್ತಿದ್ದಾರೆ. ವೋಟ್ ಚೋರಿ ಸಹಿತ ಹಲವು ವಿಚಾರಗಳನ್ನು ಬಯಲಿಗೆಳೆಯುತ್ತಿದ್ದಾರೆ. ಅವರ ಬೆನ್ನ ಹಿಂದೆ ಕಾಂಗ್ರೆಸ್ ಕಾರ್ಯಕರ್ತರು ನಿಲ್ಲಬೇಕು, ಜನರ ಬಳಿ ಮೋದಿ ಸರಕಾರದ ವೈಫಲ್ಯಗಳನ್ನು ತಿಳಿಸಬೇಕಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬಿ.ಸಿ.ರೋಡ್ ಮಿನಿ ವಿಧಾನಸೌಧದ ಮುಂಭಾಗ ಯುವ ಕಾಂಗ್ರೆಸ್ ಬಂಟ್ವಾಳ ಆಯೋಜಿಸಿರುವ ಮತಗಳ್ಳತನದ ವಿರುದ್ಧ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಪಂಜಿನ ಬೃಹತ್ ಮೆರವಣಿಗೆ ಶುಕ್ರವಾರ ಸಂಜೆ ನಡೆಯಿತು. ಸಂವಿಧಾನ ಮೂಲೆಗುಂಪು ಮಾಡುವ ಕಾರ್ಯ ಆಗುತ್ತಿದೆ. ಮೋದಿ ನೇತೃತ್ವದಲ್ಲಿ ಬಿಜೆಪಿಯವರು ಪ್ರಜಾಪ್ರಭುತ್ವ ಮೌಲ್ಯಗಳನ್ನು ಗಾಳಿಗೆ ತೂರಿದ್ದಾರೆ. ರಾಹುಲ್ ಗಾಂಧಿಯನ್ನು ಸತತ ಅವಹೇಳನ ಮಾಡಿದರು.  ಅವರು ಮಾಧ್ಯಮಗಳ ಎದುರು ಹಾಗೂ ಸಮಾಜದ ಎದುರು ಬರ್ತಾರೆ. ದೇಶದ ಪ್ರಧಾನಿ ಪತ್ರಿಕಾಗೋಷ್ಠಿಯನ್ನೇ ಮಾಡ್ತಿಲ್ಲದೇಶದ ಸಾಲ ಏರಿಕೆಯಾಗಿದೆ. ಬಂಗಾರದ ಬೆಲೆ ಜಾಸ್ತಿಯಾಗಿದೆ. ಬಿಎಸ್ ಎನ್ ಎಲ್ ಟವರ್ ಗಳು ಸೊನ್ನೆ ಸ್ಥಾನದಲ್ಲಿದೆ. ಮಧ್ಯಪ್ರದೇಶದಲ್ಲಿ ಹತ್ಯೆ ಆಗುತ್ತಿದೆ, ಸುದ್ದಿ ಆಗ್ತಿಲ್ಲ ಎಂದರು. ಮೋದೀಜಿ ಜೂಟ್ ಮತ್ ಬೋಲೊ ಖುದಾ ಕೇ ಪಾಸ್ ಜಾನಾ ಹೇ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ ಎಂದು ಲಾಡ್ ಹೇಳಿದರು.

ಅಧ್ಯಕ್ಷತೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ವಹಿಸಿ ಮಾತನಾಡಿ, ಇಂದು ಮತಗಳ್ಳತನಕ್ಕೆ ಚುನಾವಣಾ ಆಯೋಗ ಉತ್ತರದಾಯಿತ್ವರಾಗಿದ್ದಾರೆ. ಮನಮೋಹನ್ ಸಿಂಗ್ ಅಧಿಕಾರವಧಿಯಲ್ಲಿ ಅನೇಕ ಕ್ಲಿಷ್ಟಕರ ಸನ್ನಿವೇಶಗಳನ್ನು ಯಶಸ್ವಿಯಾಗಿ ನಿಭಾಯಿಸಲಾಗಿತ್ತು. ಇಂದು ಇಂಧನ ಬೆಲೆ ಅಂತಾರಾಷ್ಟ್ರೀಯ ಕಚ್ಚಾ ತೈಲಕ್ಕೆ ಕಡಿಮೆ ಆದರೂ ಕಡಿಮೆ ಆಗಿಲ್ಲ. ಕಪ್ಪು ಹಣ ವಾಪಸ್ ತಂದಿದ್ದೀರಾ ಎಂದು ಪ್ರಶ್ನಿಸಿದರು.

ಕರಾವಳಿ ಅಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಎಂ.ಎ.ಗಫೂರ್, ಬೀಜ ಮತ್ತು ಸಾವಯವ ನಿಗಮ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಇಬ್ರಾಹಿಂ ನವಾಜ್ ಬಡಕಬೈಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಾಲಕೃಷ್ಣ ಅಂಚನ್, ಚಂದ್ರಶೇಖರ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮುಹಮ್ಮದ್, ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ, ಬುಡಾ ಅಧ್ಯಕ್ಷ ಬೇಬಿ ಕುಂದರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ಮುಖಂಡರಾದ ಪಿಯೂಸ್ ಎಲ್. ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್, ಸುದೀಪ್ ಕುಮಾರ್ ಶೆಟ್ಟಿ, ಅಬ್ಬಾಸ್ ಆಲಿ, ಪದ್ಮನಾಭ ರೈ,  ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ಮಹಿಳಾ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ  ಐಡಾ ಸುರೇಶ್, ವಿಲ್ಮಾ ಮೊರಾಸ್, ಯುವಕಾಂಗ್ರೆಸ್ ನ ಬಂಟ್ವಾಳ ಬ್ಲಾಕ್ ಅಧ್ಯಕ್ಷ ಪ್ರಜ್ವಲ್ ಶೆಟ್ಟಿ, ಯುವ ಕಾಂಗ್ರೆಸ್ ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷ ವಿನಯ ಕುಮಾರ್ ಸಿಂಧ್ಯ ಸಹಿತ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ ಸ್ವಾಗತಿಸಿದರು. ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬಾಲಕೃಷ್ಣ ಅಂಚನ್ ವಂದಿಸಿದರು.  ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರ್ವಹಿಸಿದರು.

ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರದಿಂದ ನಾರಾಯಣಗುರು ಸರ್ಕಲ್ ವರೆಗೆ ಸಾಗಿ, ನಂತರ ಬಿ.ಸಿ.ರೋಡ್ ಮಿನಿ ವಿಧಾನಸೌಧದ ಎದುರು ಸಾರ್ವಜನಿಕ ಸಭೆ ನಡೆಯಿತು.

ಜಾಹೀರಾತು
NEWSDESK

www.bantwalnews.comನಲ್ಲಿ ಪ್ರಕಟಗೊಳ್ಳುವ ಜಾಹೀರಾತುಗಳ, ಲೇಖನಗಳ ವಿಚಾರಗಳಿಗೂ ವೆಬ್ ತಾಣಕ್ಕೂ ಸಂಬಂಧವಿಲ್ಲ. ಇದು ಓದುಗರ ಗಮನಕ್ಕೆ. NOTE: : All opinions regarding the advertisments and articles published in bantwalnews and the related topic are those of the author and advertiser, and this has no relation to BantwalNews. Recommendations and suggestions provided here are left for the readers' consideration.