

ಬಂಟ್ವಾಳ: ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ದ್ವಿಚಕ್ರ ವಾಹನ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಬಂಟ್ವಾಳ ಹೊಸ್ಮಾರು ನಿವಾಸಿ ಧನುಷ್ (23) ಮೃತಪಟ್ಟವರು. ಮಂಗಳೂರು ಕಡೆಯಿಂದ ಬಂಟ್ವಾಳ ಹೊಸ್ಮಾರು ಮನೆಗೆ ಬರುವ ಸಂಜೆ ವೇಳೆ ತುಂಬೆ ಸಮೀತ ರಾಮಲ್ ಕಟ್ಟೆ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Be the first to comment on "ರಸ್ತೆ ಅಪಘಾತ ಗಾಯಾಳು ಮೃತ್ಯುವಶ"