ದ. ಕ. ಜಿಲ್ಲಾ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಸಮಿತಿ, ದ. ಕ. ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ಕಲಾ ನಿಧಿ 25 ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಿತು.ಹಿರಿಯ ಚಿತ್ರಕಲಾವಿದ ಗಣೇಶ್ ಸೋಮಯಾಜಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ತುಕಾರಾಮ ಪೂಜಾರಿ ಮಾತನಾಡಿ ವಿದ್ಯಾರ್ಥಿಗಳು ಕಲೆ ಸಾಹಿತ್ಯ ಸಂಸ್ಕೃತಿ ಮುಂತಾದ ವಿಷಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಸೃಜನಶೀಲವಾಗಿ ಆಲೋಚಿಸಬೇಕು. ಹಿರಿಯರು ಬಳಸಿದ ವಸ್ತುವಿಗೂ ಸಾಂಸ್ಕೃತಿಕ ಮೌಲ್ಯ ಇದೆ. ಸಾಮಾನ್ಯ ಗೆರಟೆ ಕೂಡಾ ಜನಗಳ ಕಥೆಯನ್ನು ತೆರೆದಿಡುತ್ತದೆ. ಸಾಮಾಜಿಕ ಮೌಲ್ಯ ಇಂದಿಗೂ ಉಳಿದಿರುವುದಾದರೆ ಸೃಜನಶೀಲ ಕಲಾವಿದರ ಕೊಡುಗೆಯಿಂದ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಶಿಕ್ಷಣ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಉಪನಿರ್ದೇಶಕ ಜಿ. ಎಸ್. ಶಶಿಧರ್ ಮಾತನಾಡಿ ಭಾವನೆಗಳನ್ನು ಪ್ರಸ್ತುತಪಡಿಸಲು ಒಂದು ಚಿತ್ರ ಬಹುದೊಡ್ಡ ಮಾಧ್ಯಮ. ಹೊಸ ಸಾಧ್ಯತೆಗಳ ಹುಡುಕಾಟದಲ್ಲಿ ಪ್ರತಿಯೊಬ್ಬರು ಮಗ್ನರಾಗಬೇಕು ಎಂದರು.

2023ನೇ ಸಾಲಿನ ಕಲಾನಿಧಿ ಪ್ರಶಸ್ತಿಯನ್ನು ವೆಂಕಿ ಪಲಿಮಾರು, 2024ನೇ ಸಾಲಿನ ಕಲಾನಿಧಿ ಪ್ರಶಸ್ತಿಯನ್ನು ವಿ. ಕೆ. ವಿಟ್ಲ ಹಾಗೂ 2025 ನೇ ಸಾಲಿನ ಕಲಾನಿಧಿ ಪ್ರಶಸ್ತಿಯನ್ನು ರಾಜೇಶ್ವರಿ ಕೆ. ಮಂಗಳೂರು ಅವರಿಗೆ ಪ್ರದಾನ ಮಾಡಲಾಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ಸುಶೀಲಾ ವಿಟ್ಲ ಮಾತನಾಡಿ ಕಾರ್ಯಕ್ರಮದಿಂದ ಸ್ಪೂರ್ತಿಗೊಂಡು ವಿದ್ಯಾರ್ಥಿಗಳು ಮುಂದೆ ದೊಡ್ಡ ಕಲಾವಿದರಾಗಬೇಕು ಎಂದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಿವಶಂಕರ ರಾವ್ ಮಂಚಿ ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ಹಿರಿಯ ಚಿತ್ರಕಲಾವಿದ ಗಣೇಶ ಸೋಮಯಾಜಿ ಮಾತನಾಡಿ “ಕಾಯಕವೇ ಕೈಲಾಸವೆಂದು ಕಲಾ ಸೇವೆಗೈದ ಮಹನೀಯರಿಗೆ ಈ ಪ್ರಶಸ್ತಿ ಲಭಿಸಿದೆ. ಎಂದರು.
ಕಲಾವಿದ ಶಿಕ್ಷಕ ಅರವಿಂದ ಕುಡ್ಲ ಮಕ್ಕಳಿಗೆ ಓರಿಗಾಮಿ ಕಲೆಯ ಬಗ್ಗೆ ತರಬೇತಿ ನೀಡಿದರು. ಗೋಪಾಡ್ಕರ್ ಕ್ರಿಯೇಟಿವ್ ಆರ್ಟ್ ಬಗ್ಗೆ ಮಾಹಿತಿ ನೀಡಿ ವಿದ್ಯಾರ್ಥಿಗಳಿಗೆ ಚಿತ್ರರಚನೆಯ ಪಂಥ ನೀಡಿದರು. ವಿಜೇತ ವಿದ್ಯಾರ್ಥಿಗಳಿಗೆ ವಿಭಿನ್ನ ರೀತಿಯ ಪ್ರಶಸ್ತಿಗಳನ್ನು ನೀಡಲಾಯಿತು. ಇದೇ ಸಂದರ್ಭ ಪ್ರಶಸ್ತಿ ಪುರಸ್ಕೃತರ ಚಿತ್ರಕಲಾ ಪ್ರದರ್ಶನ ನಡೆಯಿತು. ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಸಮಿತಿ ಸದಸ್ಯರಾದ ಮನೋರಂಜಿನಿ ರಾವ್ ಉಪಸ್ಥಿತರಿದ್ದರು. ಕಲಾವಿದ ಮೋಹನ್ ಕುಮಾರ್ ಪೆರ್ಮುದೆ ಸ್ವಾಗತಿಸಿದರು. ಕಲಾನಿಧಿ ಗೋಪಾಡ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಾಲಕೃಷ್ಣ ಶೆಟ್ಟಿ, ಧನ್ಯವಾದ ಸಮರ್ಪಿಸಿದರು. ಕಲಾವಿದ ತಾರಾನಾಥ್ ಕೈರಂಗಳ ನಿರೂಪಿಸಿದರು.



Be the first to comment on "ದ.ಕ.ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಕಲಾನಿಧಿ ಪ್ರಶಸ್ತಿ ಪ್ರದಾನ"