ಗೃಹಲಕ್ಷ್ಮೀ ಫಲಾನುಭವಿಗಳ ಸ್ವಸಹಾಯ ಸಂಘಗಳ ಉದ್ಘಾಟನಾ ಕಾರ್ಯಕ್ರಮ ಬಿ.ಸಿ.ರೋಡಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಅಕ್ಟೋಬರ್ 28ರಂದು ನಡೆಯಲಿದೆ.
ಬಂಟ್ವಾಳ ತಾಲೂಕು ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಅವರು ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.
527 ಕೋಟಿ ರೂಗಳನ್ನು ಬಂಟ್ವಾಳ ತಾಲೂಕಿನಲ್ಲಿ ಫಲಾನುಭವಿಗಳು ಪಡೆದುಕೊಂಡಿದ್ದಾರೆ ಎಂದು ಹೇಳಿದ ಅವರು, ಸಂಜೀವಿನಿ ಗುಂಪಿನಿಂದ ಹೊರಗುಳಿದ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳು ಈ ಸ್ವಸಹಾಯ ಸಂಘದಲ್ಲಿ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ತಾಲೂಕಿನಲ್ಲಿ 39 ಗುಂಪುಗಳ ರಚನೆಯಾಗಿದೆ ಎಂದರು.


ಕಾರ್ಯಕ್ರಮದಲ್ಲಿ ರಾಜ್ಯದ ಪಂಚಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಚ್.ಎಂ.ರೇವಣ್ಣ, ಉಪಾಧ್ಯತಕ್ಷರಾದ ಪುಷ್ಪಾ ಅಮರನಾಥ್, ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.ಸುದ್ದಿಗೋಷ್ಠಿಯಲ್ಲಿ ಸದಸ್ಯರಾದ ಚಂದ್ರಶೇಖರ ಆಚಾರ್ಯ, ಕೃಷ್ಣಪ್ಪ ಪೂಜಾರಿ ಉಪಸ್ಥಿತರಿದ್ದರು.


Be the first to comment on "28ರಂದು ಗೃಹಲಕ್ಷ್ಮೀ ಫಲಾನುಭವಿಗಳ ಸ್ವಸಹಾಯ ಸಂಘಗಳ ಉದ್ಘಾಟನೆ"