ಬಂಟ್ವಾಳ: ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ ಶಾಲಾ ಶಿಕ್ಷಣ ಇಲಾಖೆ (ಪರವಿಪೂರ್ವ) ಉಪನಿರ್ದೇಶಕರ ಕಚೇರಿ, ಬೆಂಜನಪದವು ಸರಕಾರಿ ಪದವಿಪೂರ್ವ ಕಾಲೇಜಜು ಆಶ್ರಯದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾರ್ಗದರ್ಶನ, ಆತಿಥ್ಯ ಹಾಗೂ ಸಹಕಾರದೊಂದಿಗೆ ನಡೆಯಿತು.

ವೈಯಕ್ತಿಕ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಕಾರ್ಮೆಲ್ ಪದವಿಪೂರ್ವ ಕಾಲೇಜು,ಮೊಡಂಕಾಪು ವಿದ್ಯಾರ್ಥಿಗಳಾದ ಮೆಲ್ರಾಯ್ ಸನ್ವಿಲ್ ಡಿಸೋಜ ಹಾಗೂ ಶರಣ್ಯ ವಿ ಹೊಳ್ಳ ಚಾಂಪಿಯನ್ ಗಳಾಗಿ ಮೂಡಿಬಂದರು. ತಂಡ ಬಾಲಕರ ವಿಭಾಗದಲ್ಲಿ ಶ್ರೀ ಸತ್ಯಸಾಯಿ ಲೋಕಸೇವಾ ಪದವಿಪೂರ್ವ ಕಾಲೇಜು,ಅಳಿಕೆ ಹಾಗೂ ಬಾಲಕಿಯರ ವಿಭಾಗದಲ್ಲಿ ಶ್ರೀ ರಾಮಚಂದ್ರ ಪದವಿಪೂರ್ವ ಕಾಲೇಜು,ಪೆರ್ನೆ ಸಮಗ್ರ ಪ್ರಶಸ್ತಿ ಪಡೆದವು

ಅಧ್ಯಕ್ಷತೆಯನ್ನು ವಿಧಾನಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ವಹಿಸಿ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ವ್ಯಕ್ತಿಯ ಸರ್ವಾಂಗೀಣ ಬೆಳವಣಿಗೆಗೆ ಕಾರಣವಾಗುವ ಕ್ರೀಡೆಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿ, ಕ್ರೀಡಾಮನೋಭಾವದಿಂದ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿದಾಗ ಕ್ರೀಡೆ ಗೆಲ್ಲುತ್ತದೆ ಎಂದರು.
ಅಮ್ಮುಂಜೆ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ರಾಧಾಕೃಷ್ಣ ತಂತ್ರಿ ಕ್ರೀಡಾಧ್ವಜಾರೋಹಣ ನೆರವೇರಿಸಿದರು. ಬೆಂಜನಪದವು ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಮಹಮ್ಮದ್ ಹಾಶೀರ್ ಕ್ರೀಡಾಪಟುಗಳಿಗೆ ಪ್ರಮಾಣ ವಚನವನ್ನು ಬೋಧಿಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ವಾಮನ ಆಚಾರ್ಯ, ಸರ್ಕಾರಿ ಪದವಿಪೂರ್ವ ಕಾಲೇಜು,ಬಿ.ಮೂಡ ಪ್ರಿನ್ಸಿಪಾಲ್ ಯೂಸುಫ್ ,ಜಿಲ್ಲಾ ಕ್ರೀಡಾ ಸಂಯೋಜಕ ಪ್ರೇಮನಾಥ ಶೆಟ್ಟಿ, ತಾಲೂಕು ಕ್ರೀಡಾ ಸಂಯೋಜಕ ಸಾಯಿರಾಂ ನಾಯಕ್ ,ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲೆ),ಬೆಂಜನಪದವು ಮುಖ್ಯೋಪಾಧ್ಯಾಯರಾದ ಜಾನೆಟ್ ಲೋಬೋ ಉಪಸ್ಥಿತರಿದ್ದರು.

ಪ್ರಾಂಶುಪಾಲರಾದ ಕವಿತ ಹೇಮಚಂದ್ರ ಸ್ವಾಗತಿಸಿದರು. ಜೀವಶಾಸ್ತ್ರ ಉಪನ್ಯಾಸಕ ಹಾಗೂ ಕಾಲೇಜಿನ ಕ್ರೀಡಾ ಸಂಯೋಜಕರಾದ ಮೇದಪ್ಪ ಜಿ ಆರ್ ವಂದಿಸಿದರು .ವಿದ್ಯಾರ್ಥಿನಿಯರಾದ ಧನುಶ್ರೀ, ಸನ್ಮಿತಾ, ರುಕಿಯಾ ಫಲಾಹತ್ ,ಮಿಸ್ಬಾ, ಹಾಗೂ.ಶ್ರೀವಾಣಿ ಪ್ರಾರ್ಥಿಸಿದರು.ಆಂಗ್ಲ ಭಾಷಾ ಉಪನ್ಯಾಸಕ ರಾಧೇಶ ತೋಳ್ಪಾಡಿ ಕಾರ್ಯಕ್ರಮ ನಿರೂಪಿಸಿದರು.
ಸಮಾರೋಪ:
ಕ್ರೀಡಾಕೂಟದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸರ್ಕಾರಿ ಪದವಿಪೂರ್ವ ಕಾಲೇಜು,ಬೆಂಜನಪದವು ಪ್ರಾಂಶುಪಾಲರಾದ ಕವಿತ ಹೇಮಚಂದ್ರ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಹಮ್ಮದ್ ಸದಾಕತ್ ಮಾತನಾಡಿ,ವಿಜೇತರನ್ನು ಹಾಗೂ ಕ್ರೀಡಾಪಟುಗಳನ್ನು ಅಭಿನಂದಿಸಿದರು,
ಆಳ್ವಾಸ್ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಮಧು,ವಿಜೇತರಿಗೆ ಬಹುಮಾನ ವಿತರಿಸಿದರು. ಗಣಿತ ಶಾಸ್ತ್ರ ಉಪನ್ಯಾಸಕ ರವಿಚಂದ್ರ ಮಯ್ಯ ಸ್ವಾಗತಿಸಿದರು. ಬಂಟ್ವಾಳ ತಾಲೂಕು ಕ್ರೀಡಾ ಸಂಯೋಜಕ ಸಾಯಿರಾಂ ನಾಯಕ್ ವಂದಿಸಿದರು. ಬಂಟ್ವಾಳ ತಾಲೂಕಿನ ವಿವಿಧ ಪದವಿಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ನಿರ್ದೇಶಕರು,ಆಳ್ವಾಸ್ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಹಕರಿಸಿದರು.ಆಂಗ್ಲ ಭಾಷಾ ಉಪನ್ಯಾಸಕ ರಾಧೇಶ ತೋಳ್ಪಾಡಿ ಎಸ್ ಕಾರ್ಯಕ್ರಮ ನಿರೂಪಿಸಿದರು .


Be the first to comment on "Bantwal: ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ"