ಬಂಟ್ವಾಳ, ಬಿ.ಸಿ.ರೋಡ್ ನಲ್ಲಿ ಶಾಖೆಗಳನ್ನು ಹೊಂದಿರುವ ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರ (ರಿ), ಪುತ್ತೂರು ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಸಹಕಾರದೊಂದಿಗೆ ನೃತ್ಯಧಾರಾ ಮತ್ತು ಯಕ್ಷಗಾನ ಹಾಸ್ಯ ಕಲಾವಿದ ಕೀರ್ತಿಶೇಷ ರಸಿಕರತ್ನ ನಯನಕುಮಾರ್ ಸ್ಮರಣಾರ್ಥ ಕಲಾನಯನ ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ 1ರಂದು ಶನಿವಾರ ಸಂಜೆ 3.30ರಿಂದ ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ.
ಸಂಜೆ ೩.೩೦ಕ್ಕೆ ದೀಪಪ್ರಜ್ವಲನ, ಸಂಜೆ ೪ಕ್ಕೆ ನೃತ್ಯಧಾರಾ, ೬ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ನೃತ್ಯಗುರು ಪುತ್ತೂರು ವಿಶ್ವಕಲಾನಿಕೇತನದ ಕರ್ನಾಟಕ ಕಲಾಶ್ರೀ ವಿದುಷಿ ನಯನ ವಿ.ರೈ ಕುದ್ಕಾಡಿ ವಹಿಸುವರು. ಸಂಸದ ಕ್ಯಾ.ಬೃಜೇಶ್ ಚೌಟ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದ ಅಧ್ಯಕ್ಷ ಅಶೋಕ್ ಶೆಣೈ ಮುಖ್ಯ ಅತಿಥಿಗಳಾಗಿರುವರು. ಕಲಾನಯನ ಪ್ರಶಸ್ತಿಯನ್ನು ಸಂಶೋಧಕ, ವಿಶ್ರಾಂತ ಪ್ರಾಧ್ಯಾಪಕ ವೈ.ಉಮಾನಾಥ ಶೆಣೈ ಅವರಿಗೆ ನೀಡಲಾಗುವುದು. ಈ ವೇಳೆ ಬೆಳಕು ವಿನ್ಯಾಸಕಾರ ಪೃಥ್ವಿನ್ ಕೆ. ಉಡುಪಿ ಅವರನ್ನು ಸನ್ಮಾನಿಸಲಾಗುವುದು ಎಂದು ಸಂಚಾಲಕ ಉದಯ ವೆಂಕಟೇಶ ಭಟ್ ಮತ್ತು ನೃತ್ಯನಿರ್ದೇಶಕಿ ರೋಹಿಣಿ ಉದಯ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ