ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ನವೆಂಬರ್ 9ರಂದು ಬೆಳಗ್ಗೆ ಗಂಟೆ 9ರಿಂದ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ “ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಪೂಜಾರಿ ಮೆಲ್ಕಾರ್ ಮಾಹಿತಿ ನೀಡಿ,ಬಂಟ್ವಾಳ ತಾಲೂಕಿನ ಬಿಲ್ಲವ ಸಮುದಾಯದ ಸರಕಾರಿ ಹಾಗೂ ಸರಕಾರೇತರ ಪ್ರಾಥಮಿಕ, ಪ್ರೌಢಶಾಲಾ, ಪದವಿಪೂರ್ವ ಕಾಲೇಜು, ಪದವಿ ಕಾಲೇಜು, ಸ್ನಾತಕೋತ್ತರ, ತಾಂತ್ರಿಕ, ವೈದ್ಯಕೀಯ ವಿಭಾಗದ ಒಟ್ಟು 225 ಬೋಧಕ-ಬೋಧಕಿಯರಿಗೆ “ಬಿಲ್ಲವ ಗುರುವಂದನಾ ಗೌರವಾಭಿನಂದನೆ” ಹಾಗೂ ಜಿಲ್ಲಾ, ರಾಜ್ಯ ರಾಷ್ಟ್ರ ಮಟ್ಟದ ಸಾಧಕ ಗುರುಗಳಿಗೆ ” ಬಿಲ್ಲವ ಗುರುವಂದನಾ ಪುರಸ್ಕಾರ ” ಪ್ರದಾನ ಮಾಡಲಾಗುವುದು ಎಂದವರು ಮಾಹಿತಿ ನೀಡಿದರು.
ವಿದ್ಯಾರ್ಥಿ ವೇತನ ವಿತರಣೆ : ಬಂಟ್ವಾಳ ತಾಲೂಕಿನ ಸ್ಥಾತಕೋತ್ತರ, ತಾಂತ್ರಿಕ, ವೈದ್ಯಕೀಯದ ಅರ್ಹ 100 ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಸುಮಾರು 5 ಲಕ್ಷ ರೂ ಮೊತ್ತದ ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ ಎಂದರು.ಮಂಗಳೂರಿನ ಡಯಟ್ ಸೆಂಟರ್‌ನ ಹಿರಿಯ ಉಪನ್ಯಾಸಕರಾದ ಡಾ. ತ್ರಿವೇಣಿ ಸಮಾರಂಭ ಉದ್ಘಾಟಿಸಲಿದ್ದಾರೆ ಖ್ಯಾತ ಎಲಬು ತಜ್ಞರಾದ ಡಾ. ಸಂತೋಷ್ ಬಾಬು, ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರಶೇಖರ ಪೂಜಾರಿ, ಉದ್ಯಮಿ ಓಂಪ್ರಸಾದ್ ಬಾರ್ದಿಲ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಸಮುದಾಯ ಹಾಗೂ ಸಂಘಟನೆ ಎಂಬ ವಿಚಾರದ ಬಗ್ಗೆ ಆಪ್ತ ಸಮಾಲೋಚಕರಾದ ಸ್ಮಿತೇಶ್ ಎಸ್ ಬಾರ್ಯ ಉಪನ್ಯಾಸ ನೀಡಲಿದ್ದಾರೆ ಬಳಿಕ ನಡೆಯುವ ಸಮಾರೋಪ ಸಮಾರಂಭದಲ್ಲಿ ಮೂತ್ರರೋಗ ತಜ್ಞರಾದ ಡಾ. ಸದಾನಂದ ಪೂಜಾರಿ, ಅಖಿಲ ಭಾರತ ಬಿಲ್ಲವರ ಯೂನಿಯಾನ್ ಅಧ್ಯಕ್ಷ ನವೀನ್‌ಚಂದ್ರ ಡಿ ಸುವರ್ಣ, ಕೆದ್ದೇಲುಗುತ್ತು ಶ್ರೀ ನಾಲ್ಕೆತ್ತಾಯ ಪಂಜುರ್ಲಿ ಜೀರ್ಣೋದ್ಧಾರ ಸಮಿತಿ, ಅಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಲ್, ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ್ ಪೂಜಾರಿ ಬಳ್ಳಾಲ್ ಭಾಗ್, ಉದ್ಯಮಿ ದಿನೇಶ್ ಎಂ.ಪಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದರು. ಉಪಾಧ್ಯಕ್ಷ ಜಯಪ್ರಕಾಶ್ ಜೆ.ಎಸ್. ಕೋಶಾಧಿಕಾರಿ ಸುನೀಲ್ ಎನ್ ಕುಂದರ್, ಆಂತರಿಕ ಲೆಕ್ಕ ಪರಿಶೋಧಕ ಪ್ರಶಾಂತ್ ಕೋಟ್ಯಾನ್, ಜತೆ ಕಾರ್ಯದರ್ಶಿ ಆನಂದ ಸಾಲ್ಯಾನ್ ಶಂಬೂರು ಉಪಸ್ಥಿತರಿದ್ದರು.