ರಾಷ್ಟ್ರೀಯ ಜೀವನೋಪಾಯ ಅಭಿಯಾನ ಅಡಿಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯದ 8 ಜಿಲ್ಲೆಗಳ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಬೆಂಗಳೂರು ಕೌಶಲ್ಯ ಶೃಂಗಸಭೆ-2025 ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗೋಳ್ತಮಜಲು ಸ್ವಸಹಾಯ ಸಂಘವೂ ಸೇರಿದೆ.
ಬೆಂಗಳೂರಿನ ಲಲಿತ ಅಶೋಕ ಹೊಟೇಲ್ ನಲ್ಲಿ ಆಯೋಜಿಸಲಾಗಿರುವ ಮೂರು ದಿನಗಳ ಬೆಂಗಳೂರು ಕೌಶಲ್ಯ ಶೃಂಗಸಭೆ-2025ಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಶರಣ ಪ್ರಕಾಶ್ ಆರ್ ಪಾಟೀಲ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಗೋಳ್ತಮಜಲಿನ ಆಶೀರ್ವಾದ ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟದ ಶ್ರೀ ಸಿದ್ದಿವಿನಾಯಕ ಮಹಿಳಾ ಸ್ವ-ಸಹಾಯಕ್ಕೆ ಪ್ರಶಸ್ತಿ ನೀಡಿ ಗೌರವಿಸಿದರು.