ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಮಂಗಳೂರು ನಗರದ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಅವರುಗಳಿಂದ 24.57 ಗ್ರಾಂ ತೂಕದ MDMA ಮಾದಕ ವಸ್ತು ಎಂಡಿಎಂಎ ಅನ್ನು ವಶಪಡಿಸಿಕೊಂಡಿರುತ್ತಾರೆ.
ಪ್ರಕರಣ -1
ನವೆಂಬರ್ 4ರಂದು ಮಂಗಳೂರು ನಗರದ ಬಂದರು ಮತ್ತು ದಕ್ಕೆಯ ಪರಿಸರದಲ್ಲಿ ಆಟೋ ರಿಕ್ಷಾದಲ್ಲಿ ಇದ್ದುಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಪೊಲೀಸರು ಆಟೋ ಚಾಲಕ ಅಡ್ಯಾರ್ ಕಣ್ಣೂರು ನಿವಾಸಿ ಅಬ್ದುಲ್ ಸಲಾಮ್ (39) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ರೂ. 1,20,000 ಮೌಲ್ಯದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಆಟೋ ರಿಕ್ಷಾ, ಮೊಬೈಲ್ ಪೋನ್, ತೂಕಮಾಪನ, ಖಾಲಿ ಜಿಪ್ ಲಾಕ್ ಕವರ, ಸಹಿತ ಒಟ್ಟು ರೂ. 2,30,500 ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣ -2
ನವೆಂಬರ್ 6ರಂದು ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಬೋಳಿಯಾರು ಪರಿಸರದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಪೊಲೀಸರು, ಬೊಳಿಯಾರು ಜಾರದಗುಡ್ಡೆ ನಿವಾಸಿ ಮೊಹಮ್ಮದ್ ನಾಸೀರ್ @ ಶಾಕೀರ್@ ಚಾಕಿ, (28) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ರೂ. 1,20,000 ಮೌಲ್ಯದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಕಪ್ಪು ಬಣ್ಣದ ಯಮಹಾ ಕಂಪೆನಿಯ ಯಮಹಾ FZ ಬೈಕ್, ಮೊಬೈಲ್ ಪೋನ್, ಖಾಲಿ ಜಿಪ್ ಲಾಕ್ ಕವರ, ಸಹಿತ ಒಟ್ಟು ರೂ. 2,05,000 ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.