ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಭಾನುವಾರ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ಡಯಟ್ ಸೆಂಟರ್ ಹಿರಿಯ ಉಪನ್ಯಾಸಕಿ ಡಾ. ತ್ರಿವೇಣಿ, ಗುರುಗಳು ಕೇವಲ ಪಾಠ ಬೋಧಕರು ಮಾತ್ರವಲ್ಲ, ಅವರು ಜೀವನದ ನಿಜವಾದ ಮಾರ್ಗದರ್ಶಕರು. ಮೌಲ್ಯಗಳು ಜೀವಂತವಾಗಿರುವಂತೆ ಮಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ತರ ಎಂದರು.
ಬಂಟ್ವಾಳ ತಾಲೂಕಿನ ಬಿಲ್ಲವ ಸಮುದಾಯದ ಸರಕಾರಿ ಹಾಗೂ ಸರಕಾರೇತರ ಪ್ರಾಥಮಿಕ, ಪ್ರೌಢಶಾಲಾ, ಪದವಿಪೂರ್ವ ಕಾಲೇಜು, ಪದವಿ ಕಾಲೇಜು, ಸ್ನಾತಕೋತ್ತರ, ತಾಂತ್ರಿಕ, ವೈದ್ಯಕೀಯ ವಿಭಾಗದ ಒಟ್ಟು 195 ಬೋಧಕಬೋಧಕಿಯರಿಗೆ ಬಿಲ್ಲವ ಗುರುವಂದನಾ ಗೌರವಾಭಿನಂದನೆ ಹಾಗೂ ಜಿಲ್ಲಾ, ರಾಜ್ಯ ರಾಷ್ಟ್ರ ಮಟ್ಟದ ಸಾಧಕ 10 ಗುರುಗಳಿಗೆ ಬಿಲ್ಲವ ಗುರುವಂದನಾ ಪುರಸ್ಕಾರ ಪ್ರದಾನ ಮಾಡಲಾಯಿತು
ಬಿಇಆರ್ ಡಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಾರಾನಾಥ್ ಸಾಲ್ಯಾನ್, ಮೂತ್ರರೋಗ ತಜ್ಞರಾದ ಡಾ. ಸದಾನಂದ ಪೂಜಾರಿ, ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರಶೇಖರ ಪೂಜಾರಿ, ಉದ್ಯಮಿ ಓಂಪ್ರಸಾದ್ ಬಾರ್ದಿಲ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು
ಈ ಸಂದರ್ಭದಲ್ಲಿ ಜನವರ 25ರಂದು ನಡೆಯುವ ಕೋಟಿ ಚೆನ್ನಯ ಕ್ರೀಡೋತ್ಸವದ ಆಮಂತ್ರಣ ಪತ್ರ ಬಿಡುಗಡೆಗೊಳಿಸಲಾಯಿತು, ಕ್ರೀಡಾಕೂಟದ ಸಂಚಾಲಕರಾದ ಬೇಬಿ ಕುಂದರ್ ಉಪಸ್ಥಿತರಿದ್ದರು
ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಪೂಜಾರಿ ಮೆಲ್ಕಾರ್, ಕೋಶಾಧಿಕಾರಿ ಸುನೀಲ್ ಎನ್ ಕುಂದರ್, ಜತೆ ಕಾರ್ಯದರ್ಶಿ ಆನಂದ ಸಾಲ್ಯಾನ್ ಶಂಬೂರು, ಆಂತರಿಕ ಲೆಕ್ಕ ಪರಿಶೋಧಕ ಪ್ರಶಾಂತ್ ಕೋಟ್ಯಾನ್, ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಉಪಸ್ಥಿತರಿದ್ದರು ಸಂಘದ ಉಪಾಧ್ಯಕ್ಷ ಜಯಪ್ರಕಾಶ್ ಜೆ ಎಸ್ ಸ್ವಾಗತಿಸಿದರು, ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.