
ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ನಿಯಮಿತದ ಆಡಳಿತ ಮಂಡಳಿ ನಿರ್ದೇಶಕರಾಗಿ ಚುನಾಯಿತಗೊಂಡ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ದಿನೇಶ್ ಪೂಜಾರಿ ಹುಲಿಮೇರು ಇವರನ್ನು ಸಿದ್ದಕಟ್ಟೆ ಪ್ರಾಥಮಿಕ ಸಹಕಾರ ಸಂಘದ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು.
ಈ ಸಂದರ್ಭ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಉಪಾಧ್ಯಕ್ಷರಾದ ಸಂದೇಶ ಶೆಟ್ಟಿ, ನಿರ್ದೇಶಕರುಗಳಾದ ಸತೀಶ್ ಪೂಜಾರಿ, ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ವಿಶ್ವನಾಥ ಶೆಟ್ಟಿಗಾರ್, ವೀರಪ್ಪ ಪರವ, ಜಾರಪ್ಪ ನಾಯ್ಕ, ಶಿವ ಗೌಡ , ಪುಷ್ಪಲತಾ ಎಸ್. ಆರ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ಶೆಟ್ಟಿ, ನವೀನ ಹೆಗ್ಡೆ ಉಪಸ್ಥಿತರಿದ್ದರು. ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಸ್ವಾಗತಿಸಿದರು. ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರ್ವಹಿಸಿ ನಿರ್ದೇಶಕಿ ಮಂದಾರತಿ ಎಸ್ ಶೆಟ್ಟಿ ಧನ್ಯವಾದವಿತ್ತರು.


Be the first to comment on "ಸಿದ್ಧಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಅಭಿನಂದನೆ"