ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ನಿಯಮಿತದ ಆಡಳಿತ ಮಂಡಳಿ ನಿರ್ದೇಶಕರಾಗಿ ಚುನಾಯಿತಗೊಂಡ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ದಿನೇಶ್ ಪೂಜಾರಿ ಹುಲಿಮೇರು ಇವರನ್ನು ಸಿದ್ದಕಟ್ಟೆ ಪ್ರಾಥಮಿಕ ಸಹಕಾರ ಸಂಘದ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು.
ಈ ಸಂದರ್ಭ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಉಪಾಧ್ಯಕ್ಷರಾದ ಸಂದೇಶ ಶೆಟ್ಟಿ, ನಿರ್ದೇಶಕರುಗಳಾದ ಸತೀಶ್ ಪೂಜಾರಿ, ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ವಿಶ್ವನಾಥ ಶೆಟ್ಟಿಗಾರ್, ವೀರಪ್ಪ ಪರವ, ಜಾರಪ್ಪ ನಾಯ್ಕ, ಶಿವ ಗೌಡ , ಪುಷ್ಪಲತಾ ಎಸ್. ಆರ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ಶೆಟ್ಟಿ, ನವೀನ ಹೆಗ್ಡೆ ಉಪಸ್ಥಿತರಿದ್ದರು. ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಸ್ವಾಗತಿಸಿದರು. ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರ್ವಹಿಸಿ ನಿರ್ದೇಶಕಿ ಮಂದಾರತಿ ಎಸ್ ಶೆಟ್ಟಿ ಧನ್ಯವಾದವಿತ್ತರು.