ಶನಿವಾರ ಮುಂಜಾನೆ ಸಮಯ, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಬೆಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ KA 02 AE 6146 ನೊಂದಣಿ ಸಂಖ್ಯೆಯ ಇನ್ನೋವಾ ಕಾರು, ಚಾಲಕನ ನಿಯಂತ್ರಣ ತಪ್ಪಿ ಬಂಟ್ವಾಳ ಬಿ.ಸಿ. ರೋಡ್ ಬಳಿ, ನಾರಾಯಣ ಗುರು ವೃತ್ತಕ್ಕೆ ಡಿಕ್ಕಿಯಾಗಿರುತ್ತದೆ. ಅಪಘಾತದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 09 ಜನರ ಪೈಕಿ, ಬೆಂಗಳೂರು ನಿವಾಸಿಗಳಾದ ರವಿ (64), ನಂಜಮ್ಮ (75), ರಮ್ಯಾ.(23) ಎಂಬವರುಗಳು ಮೃತಪಟ್ಟಿರುತ್ತಾರೆ.
ಗಾಯಾಳುಗಳಾದ ಸುಶೀಲ, ಕೀರ್ತಿ ಕುಮಾರ್, ಕಿರಣ್, ಬಿಂದು, ಪ್ರಶಾಂತ್ ಹಾಗೂ ಚಾಲಕ ಸುಬ್ರಹ್ಮಣ್ಯ ಸೇರಿದಂತೆ ಉಳಿದ 06 ಜನರು ರವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿರುತ್ತದೆ.
ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಸಂಬಂಧಿಕರಾಗಿದ್ದು, ಪ್ರಕರಣದ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ:151/25, ಕಲಂ: 281,125A, 106 BNS ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು.


Be the first to comment on "ಬಿ.ಸಿ.ರೋಡ್ ಅಪಘಾತ: ಮೂವರು ಸಾವು"