2024-25 ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಮೊತ್ತ ಬಿಡುಗಡೆಗೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತಗತಿನ ಸಹಕಾರ ಸಂಘ ಅಧ್ಯಕ್ಷ ಪ್ರಭಾಕರ ಪ್ರಭು ಮನವಿ ಮಾಡಿದ್ದಾರೆ.

2024-25 ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕರಾವಳಿ ಜಿಲ್ಲೆಗಳಲ್ಲಿನ ಅಡಿಕೆ ಮತ್ತು ಕರಿಮೆಣಸು ಬೆಳೆಗಳಿಗೆ ಸಂಬಂಧಿಸಿದಂತೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿಯಲ್ಲಿ ಅಡಿಕೆ ಬೆಳೆಗಾರರು ತಮ್ಮ ಜಮೀನಿನಲ್ಲಿರುವ ಅಡಿಕೆ ಬೆಳೆ ಮತ್ತು ಕರಿಮೆಣಸು ಬೆಳೆಗಳಿಗೆ ಅನುಗುಣವಾಗಿ ಬೆಳೆ ಸಾಲ ಹೊಂದಿರುವ ರೈತರು ಬೆಳೆವಿಮೆ ಕುರಿತು ಪ್ರಿಮಿಯಂ ಪಾವತಿಸಿದ್ದು,ಅದರಂತೆ ಈ ವರ್ಷದಲ್ಲಿ ಬೆಳೆ ವಿಮೆ ಪರಿಹಾರ ಮೊತ್ತ ದೊರಕುವ ನಿರೀಕ್ಷೆಯಲ್ಲಿದ್ದು ಈ ಹಣದಿಂದಾಗಿ ತೋಟಾಗಾರಿಕೆಗೆ ಸಂಬಂಧಿಸಿದ ಕೆಲಸ ಕಾರ್ಯಗಳಿಗೆ ವಿನಿಯೋಗಿಸುವ ನಿಟ್ಟಿನಲ್ಲಿದ್ದಾರೆ. ಪ್ರತಿ ವರ್ಷಂಪ್ರತಿ ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಮೊತ್ತವು ಆಕ್ಟೋಬರ್ ತಿಂಗಳ ಕೊನೆಯಲ್ಲಿ ಅಥವಾ ನವೆಂಬರ್ ತಿಂಗಳ ಮೊದಲ ವಾರದಲ್ಲಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗುತ್ತಿದ್ದು ಈ ವರ್ಷದಲ್ಲಿ ನವೆಂಬರ್ ಮೂರನೇ ವಾರ ಕಳೆದರೂ ರೈತರಿಗೆ ಪರಿಹಾರ ಮೊತ್ತ ಬಿಡುಗಡೆಯಾಗಿರುವುದಿಲ್ಲ ಎಂದು ರೈತರು ವಿಚಾರಿಸುತ್ತಿದ್ದಾರೆ .ಈ ಹಣದಿಂದಲೇ ಅವಲಂಬಿತರಾಗಿರುವ ತೋಟಾಗಾರಿಕೆ ಕೆಲಸಕಾರ್ಯಗಳು ಸ್ಥಗಿತವಾಗಿದ್ದು ಪರಿಹಾರ ಹಣ ಬಿಡುಗಡೆಯಾಗದಿರುವ ಬಗ್ಗೆ ಅಡಿಕೆ ಬೆಳೆಗಾರರು ಪ್ರಾಥಮಿಕ ಸಹಕಾರ ಸಂಘಗಳಿಗೆ ಹೋಗಿ ವಿಚಾರಿಸುತ್ತಿದ್ದಾರೆ .
ಈ ನಿಟ್ಟಿನಲ್ಲಿ ಬೆಳೆ ವಿಮೆ ಪರಿಹಾರ ಮೊತ್ತ ಹಣವನ್ನು ತಕ್ಷಣದಿಂದಲೇ ಬಿಡುಗಡೆ ಮಾಡಿಸಿ , ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲು ವಿಮಾ ಕಂಪೆನಿಗೆ ನಿರ್ದೇಶನ ನೀಡುವರೇ ಈ ಮೂಲಕ ವಿನಂತಿಸಿದ್ದಾರೆ.


Be the first to comment on "ಬೆಳೆವಿಮೆ ಪರಿಹಾರ ಮೊತ್ತ ಬಿಡುಗಡೆಗೆ ಸಿದ್ಧಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಪ್ರಭಾಕರ ಪ್ರಭು ಮನವಿ"