ಬಿ.ಸಿ.ರೋಡ್ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ಬಂಟ್ವಾಳ ಫೆಸ್ಟ್ ವತಿಯಿಂದ ಒಂದು ತಿಂಗಳ ಕಾಲ ನಡೆಯಲಿರುವ ಬಂಟ್ವಾಳ ಉತ್ಸವಕ್ಕೆ ಶುಕ್ರವಾರ ಸಂಜೆ ಚಾಲನೆ ನೀಡಲಾಯಿತು.
ಗ್ರಾಹಕರ ಮೇಳ, ಅಮ್ಯೂಸ್ ಮೆಂಟ್ ಪಾರ್ಕ್ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಳಗೊಂಡಿರುವ ಬಂಟ್ವಾಳ ಉತ್ಸವ ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಒಂದು ತಿಂಗಳ ಕಾಲ ಹಬ್ಬದ ವಾತಾವರಣ ಸೃಷ್ಠಿಯಾಗಲಿದ್ದು. ಅಶಕ್ತರ ಪಾಲಿಗೆ ನೆರವಾಗುವ ಸಂಘಟಕರ ಉದ್ದೇಶ ಈಡೇರಲಿ ಎಂದು ಹಾರೈಸಿದರು.
ಇದೇ ವೇಳೆ ಐವರು ಅಶಕ್ತರಿಗೆ ಸಹಾಯಧನವನ್ನು ವಿತರಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ಯಕ್ಷಗಾನ ಹಿರಿಯ ಕಲಾವಿದ, ಸರಪಾಡಿ ಅಶೋಕ್ ಶೆಟ್ಟಿ ಮಾತನಾಡಿ ಪ್ರತಿಭಾವಂತರು ಸಮಾಜದ ಆಸ್ತಿಯಾಗಿದ್ದು,ಅವರಿಗೆ ಪ್ರೋತ್ಸಾಹಿಸುವುದು ನಮ್ಮೆಲ್ಲರ ಧರ್ಮ ಎಂದರು.
ಬಂಟ್ವಾಳ ತುಳು ಕೂಟ ಅಧ್ಯಕ್ಷ ಸುದರ್ಶನ್ ಜೈನ್ ಪಂಜಿಕಲ್ಲು ಅಧ್ಯಕ್ಷತೆ ವಹಿಸಿ ಮಾತನಾಡಿ ತಾಲೂಕಿನ ಘನತೆ, ಗೌರವವನ್ನು ಉಳಿಸಿಕೊಂಡು ಕಾರ್ಯಕ್ರಮ ನಡೆಯುವಂತಾಗಲಿ ಎಂದು ಹಾರೈಸಿದರು.
ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಲೊರೆಟ್ಟೋ, ಉಪಾಧ್ಯಕ್ಷ ಮೊನೀಶ್ ಆಲಿ, ಬುಡಾ ಅಧ್ಯಕ್ಷ ಬೇಬಿ ಕುಂದರ್ , ಮೂಡೂರು ಪಡೂರು ಕಂಬಳ ಸಮಿತಿ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್, ಜಿಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ,ಗಾಣಿಗ ಸಮಾಜ ಸಂಘ ಅಧ್ಯಕ್ಷ ಕೃಷ್ಣಪ್ಪ ಗಾಣಿಗ, ನ್ಯಾಯವಾದಿ ಉಮೇಶ್ ಕುಮಾರ್ ವೈ, ಉದ್ಯಮಿ ಹಂಝ ಬಸ್ತಿಕೋಡಿ, ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್, ದ.ಕ.ಜಿಲ್ಲಾ ವರ್ತಕರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್, ಪುರಸಭೆಯ ನಾಮನಿರ್ದೇಶಿತ ಸದಸ್ಯ ಜಗದೀಶ್ ಕುಂದರ್, ಶಿಕ್ಷಕಿ ಜ್ಯೋತಿ ಮಾರ್ಟಿನ್ ಉಪಸ್ಥಿತರಿದ್ದರು. ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭ ಹಾರೈಸಿದರು. ಸಂಘಟಕರಾದ ಇಬ್ರಾಹಿಂ ಕೈಲಾರ್, ಮಹಮ್ಮದ್ ನಂದಾವರ, ನವೀನ್ ಕುಮಾರ್, ಶಿವಪ್ರಸಾದ್ ಕೊಟ್ಟಾರಿ, ವಿಶ್ವನಾಥ ಕೊಟ್ಟಾರಿ ಉಪಸ್ಥಿತರಿದ್ದರು. ಸೌಮ್ಯ ಭಂಡಾರಬೆಟ್ಟು ಸ್ವಾಗತಿಸಿದರು.ಶ್ರೀಶವಾಸವಿ ಕಾರ್ಯಕ್ರಮ ನಿರೂಪಿಸಿದರು.