ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಬಾಯಿಲ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 27 ವರ್ಷಗಳಿಂದ ಶಿಕ್ಷಕಿಯಾಗಿ ಕರ್ತವ್ಯ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕಿ ಜೆಸಿಂತಾ ಪ್ಲೇವಿ ಮಸ್ಕರೇನಸ್ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.
ಶಾಲಾ ಹಿರಿಯ ವಿದ್ಯಾರ್ಥಿಗಳು ಸೇರಿ ಗುರುವಿಗೆ ಗುರುದಕ್ಷಿಣೆಯಾಗಿ ಶಾಲೆಯಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸಿದ್ದರು.
ಮಂಗಳೂರಿನ ಎ .ಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಅವರಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಇಂಡಿಯನ್ ರೆಡ್ಕ್ರಾಸ್ ಬ್ಲಡ್ ಸೆಂಟರ್ ಮಂಗಳೂರು ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಲಕ್ಷ್ಮಿ ವಹಿಸಿದ್ದರು.ವೀರಕಂಬ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ದನ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಮಜಿ ಶಾಲಾ ಶಿಕ್ಷಕಿ ಸಂಗೀತ ಶರ್ಮ ಅಭಿನಂದನಾ ಭಾಷಣ ಮಾಡಿದರು.
ಶಾಲೆಗೆ ಉಚಿತವಾಗಿ ತರಕಾರಿ ಪೂರೈಸುತ್ತಿರುವ ಮೆಲ್ಕಾರ್ ಚಂದ್ರಿಕಾ ವೆಜಿಟೇಬಲ್ ಮಾಲಕ ಶರೀಫ್, 45 ಬಾರಿ ರಕ್ತದಾನ ಮಾಡಿದ ಲೋಕೇಶ್ ಸುವರ್ಣ ಬಿಸಿ ರೋಡ್, ಹಾಗೂ ಶಾಲಾ ಗೌರವ ಶಿಕ್ಷಕಿಯವರನ್ನು ಗೌರವಿಸಲಾಯಿತು. ವೀರಕಂಭ ಪಂಚಾಯತ್ ಸದಸ್ಯರಾದ ಲಕ್ಷ್ಮಿ, ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಶೇಖರ್ ಬಂಗೇರ, ಕೃಷ್ಣಪ್ಪ ಪೂಜಾರಿ ಕೆಪುಳಕೋಡಿ, ಸಂದೀಪ್ ಶೆಟ್ಟಿ ಅರೆಬೆಟ್ಟು, ಜಯಪ್ರಕಾಶ್ ತೆಕ್ಕಿಪಾಪು, ರಮಾನಂದ ಶೆಟ್ಟಿ, ಡಾಕ್ಟರ್ ಗಣೇಶ್ ಚಾರ್ಮಾಡಿ, ಡಾ. ನಾಗಭೂಷಣ್ ಉಪಸ್ಥಿತರಿದ್ದರು.
ಪ್ರಭಾರ ಮುಖ್ಯ ಶಿಕ್ಷಕಿ ವಾರಿಜಾಕ್ಷಿ ಸ್ವಾಗತಿಸಿದರು. ಹಿರಿಯ ವಿದ್ಯಾರ್ಥಿ ಪ್ರತೀಕ ಅಭಿನಂದನ ಪತ್ರ ವಾಚಿಸಿದರು. ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುನಿಲ್ ವಂದಿಸಿದರು. ಶಾಲಾ ಹಿರಿಯ ವಿದ್ಯಾರ್ಥಿಗಳಾದ ನಿರ್ಮಲ ಹಾಗೂ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು