
ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಮಿತಿ, ಬಿ.ಸಿ.ರೋಡ್ ಆಶ್ರಯದಲ್ಲಿ ಬಿ.ಸಿ.ರೋಡಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ನಡೆದ ಶ್ರೀ ದುರ್ಗಾ ನಮಸ್ಕಾರ ಪೂಜಾ ಸಭಾ ಕಾರ್‍ಯಕ್ರಮದಲ್ಲಿ ಅತಿ ಹೆಚ್ಚು ಅಂಕ ಪಡೆದ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಡಿಗ್ರಿ, ವೃತ್ತಿ ಶಿಕ್ಷಣ ಕೋರ್ಸುಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಮಿತಿ ವತಿಯಿಂದ ಚಿನ್ನದ ಪದಕವನ್ನು ನೀಡಿ ಪುರಸ್ಕರಿಸಲಾಯಿತು.
ಮಕ್ಕಳ ವ್ಯಕ್ತಿತ್ವ ವಿಕಸನ, ಗುರುವಿನ ಮಾರ್ಗದರ್ಶನ, ಹಿರಿಯರಿಗೆ ಗೌರವ ನೀಡುವ ಬಗ್ಗೆ ವಿವರಿಸಿ ಹಾಗೂ ಆಚಾರ ವಿಚಾರಗಳನ್ನು ಮೈಗೂಡಿಸಿಗೊಂಡರೆ ಮುಂಬರುವ ಭವ್ಯ ಭವಿಷ್ಯಕ್ಕೆ ನಾಂದಿಯಾಗುತ್ತದೆ ಉತ್ತಮ ಜಿ.ಎಸ್.ಬಿ. ಸಮಾಜ ನಿರ್ಮಾಣವೇ ನಮ್ಮ ಗುರಿಯಾಗಬೇಕೆಂದು ಹೇಳಿದ ಮಂಗಳೂರು ಎಸ್.ಡಿ.ಎಂ. ಶಾಲೆ ಸಂಸ್ಕೃತ ಅಧ್ಯಾಪಕ ಗಜಾನನ ಬೋವಿಕಾನ ಸಮಿತಿ ಕಾರ್ಯಚಟುವಟಿಕೆಗಳಿಗೆ ಶುಭ ಹಾರೈಸಿದರು.
ಸಮಿತಿ ಅಧ್ಯಕ್ಷರಾದ ಎನ್. ದುರ್ಗಾದಾಸ್ ಶೆಣೈ ಸಭಾಧ್ಯಕ್ಷತೆಯನ್ನು ವಹಿಸಿದರು. ಸಮಿತಿಯ ರಘುವೀರ್ ಕಾಮತ್, ಪವನ್ ಕುಮಾರ್ ನಾಯಕ್, ರಾಧಾಕೃಷ್ಣ ಬಾಳಿಗ, ಬಿ. ಕೃಷ್ಣ ನಾಯಕ್, ಅನಂತಕೃಷ್ಣ ನಾಯಕ್, ಮಧುಸೂಧನ್ ಶೆಣೈ ಹಾಗೂ ಇತರ ಸದಸ್ಯರು ಸಹಕರಿಸಿದರು. ಪ್ರಧಾನ ಕಾರ್ಯದರ್ಶಿ ಎಂ. ಸುಬ್ರಹ್ಮಣ್ಯ ಪೈ ಸ್ವಾಗತಿಸಿ, ಪ್ರಸ್ತಾವನೆಗೈದು ಕಾರ್ಯಕ್ರಮ ನಿರೂಪಿಸಿದರು.


Be the first to comment on "ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಮಿತಿ, ಬಿ.ಸಿ.ರೋಡ್ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ"