ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ಪುರಸಭಾ ಸಮಿತಿ ವತಿಯಿಂದ ಬಿ.ಸಿ.ರೋಡಿನ ನೂತನ ವೃತ್ತದ ನಿರ್ಮಾಣ ಹಾಗೂ ರಾಷ್ಟ್ರೀಯ ಹೆದ್ದಾರಿಯ ಮಂದಗತಿ ಕಾಮಗಾರಿ ವಿರುದ್ಧ ಪ್ರತಿಭಟನೆ ನಡೆಯಿತು.
ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಮಾತನಾಡಿ, ಬಿ.ಸಿ.ರೋಡ್ ಕಲ್ಲಡ್ಕ ಚತುಷ್ಪಥ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ. ಬಿ.ಸಿ.ರೋಡಿನ ವೃತ್ತವನ್ನು ತಕ್ಷಣ ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕ್ರಮ ಕೈಗೊಳ್ಳಬೇಕು.ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಅಧ್ಯಕ್ಷತೆಯನ್ನು ಎಸ್‌ಡಿಪಿಐ ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷರಾದ ಶರೀಫ್ ವಳವೂರು ವಹಿಸಿದ್ದರು.
ಎಸ್‌ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಶಾಹುಲ್ ಎಸ್‌ಎಚ್ ಮತ್ತು ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ ಮಾತನಾಡಿ,ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವ್ಯವಸ್ಥೆಯ ವಿರುದ್ಧ ಹೋರಾಟ ಮುಂದುವರಿಸುವುದಾಗಿ ಹೇಳಿದರು.