ಪಾಣೆಮಂಗಳೂರು ಎಸ್.ವಿ.ಎಸ್. ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ, ಹವ್ಯಾಸಿ ಯಕ್ಷಗಾನ ತಾಳಮದ್ದಳೆ ಅರ್ಥಧಾರಿ, ನರಿಕೊಂಬು ಗ್ರಾಮದ ಮಾಣಿಮಜಲು ನಿವಾಸಿ ನಾಟಿ ಕೃಷ್ಣರಾಜ ಶೆಟ್ಟಿ (90) ಬೆಂಗಳೂರಿನ ಮಗಳ ಮನೆಯಲ್ಲಿ ಇಂದು ಶನಿವಾರ ಬೆಳಗ್ಗೆ ಸುಮಾರು 4 ಗಂಟೆಗೆ ನಿಧನ ಹೊಂದಿದ್ದಾರೆ. ಅವರು ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳು, ಶಿಷ್ಯವೃಂದವನ್ನು ಹೊಂದಿದ್ದರು. ಅವರ ಪಾರ್ಥಿವ ಶರೀರ ಇಂದು ಅಪರಾಹ್ನ ಸುಮಾರು 12 ಗಂಟೆಗೆ ನರಿಕೊಂಬು ಗ್ರಾಮದ ಮಾಣಿಮಜಲಿನಲ್ಲಿರುವ ಅವರ ಸ್ವಗೃಹಕ್ಕೆ ಬರಲಿದೆ