ಕೇಂದ್ರ ಸರಕಾರವು ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಕಾರ್ಮಿಕ ಸಂಹಿತೆಗಳಾಗಿ ಮಾಡಿರುವುದನ್ನು ತಡೆಯಲು ಹಾಗೂ ಅಕ್ಷರ ದಾಸೋಹ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಸಿಸಿಟಿಯು ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಬಿಸಿರೋಡ್ ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಯಿತು. ಈ ಸಂದರ್ಭ, ಬಂಟ್ವಾಳ ತಹಸೀಲ್ದಾರ್ ಮೂಲಕ ಕಾರ್ಮಿಕ ಸಚಿವರಿಗೆ ಮನವಿ ನೀಡಲಾಯಿತು.

ಪ್ರತಿಭಟನೆಯಲ್ಲಿ ಎಐಸಿಸಿಟಿಯು ಜಿಲ್ಲಾ ಅದ್ಯಕ್ಷ ರಾಮಣ್ಣ ವಿಟ್ಲ ಮಾತನಾಡಿ ಸರಕಾರದ ನೀತಿಯನ್ನು ಟೀಕಿಸಿದರು, ಜಿಲ್ಲಾ ಕಾರ್ಯದರ್ಶಿ ಮೋಹನ್ ಕೆ.ಇ. ಮಾತನಾಡಿದರು. ಎ.ಐ.ಸಿ.ಸಿ.ಟಿ.ಯು ಕೊಡಗು ಜಿಲ್ಲಾ ಅಧ್ಯಕ್ಷರಾದ ಮೋಹನ್ ವಿರಾಜ್ಪೇಟೆ,ಅಕ್ಷರ ದಾಸೋಹ ನೌಕರರ ಸಮಸ್ಯೆಗಳು ಹಾಗೂ ಕೇಂದ್ರ ಜಾರಿಗೆ ತರಲುದ್ದೇಶಿಸಿರುವ ಕಾರ್ಮಿಕ ಕಾಯ್ದೆಗಳ ಕುರಿತು ವಿವರಿಸಿದರು. ಸಜೇಶ್ ವಿಟ್ಲ, ಸುಲೈಮಾನ್ ಕೆಲಿಂಜ, ಸಂಜೀವ ಬೆಳ್ತಂಗಡಿ, ಅಕ್ಷರ ದಾಸೋಹ ನೌಕರರ ಸಂಘದ ಅದ್ಯಕ್ಷರಾದ ಜಯಶ್ರೀ ಆರ್.ಕೆ, ಕಾರ್ಯದರ್ಶಿ ವಾಣಿಶ್ರೀ ಮುಂತಾದವರು ಭಾಗವಹಿಸಿದ್ದರು.



Be the first to comment on "ಎಐಸಿಸಿಟಿಯುನಿಂದ ಬಿ.ಸಿ.ರೋಡ್ ನಲ್ಲಿ ಪ್ರತಿಭಟನೆ"