ಕಡೇಶಿವಾಲಯ ಸಮೀಪ ಶೇರಾ ಎಂಬಲ್ಲಿರುವ ದ.ಕ.ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು.
ದಾನಿಗಳು ಸಂಘ-ಸಂಸ್ಥೆಗಳು ಮಾಡುವ ಸಹಕಾರ ಸರಕಾರಿ ಶಾಲಾ ಮಕ್ಕಳ ಜೀವನಕ್ಕೆ ಕೊಡುವ ಆಸರೆಯಾಗಿದೆ ಎಂದು ಚಲನಚಿತ್ರ ನಟ ಹಾಗೂ ಬಿಗ್ ಬಾಸ್ ಕನ್ನಡ ಸೀಸನ್ 11 ರ ಸ್ಪರ್ಧಾಳು ಧನರಾಜ್ ಆಚಾರ್ಯ ಈ ಸಂದರ್ಭ ಹೇಳಿದರು.
ಬೆಳಗ್ಗಿನ ಶಾಲಾ ಧ್ವಜಾರೋಹಣ ಕಾರ್ಯಕ್ರಮವನ್ನು ವರ್ಗಾವಣೆಗೊಂಡ ಶಾಲಾ ಶಿಕ್ಷಕಿ ಜಯಲಕ್ಷ್ಮಿ ಪಿ. ನೆರವೇರಿಸಿದರು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಗಂಗಾಧರ ರೈ ಶಾಲಾ ಕಟ್ಟಡಕ್ಕೆ ಮೇಲ್ಚಾವಣಿ ಶೀಟ್ ಲಯನ್ಸ್ ಕ್ಲಬ್ ಮಾಣಿ ಹೆಸರಿನಲ್ಲಿ ಅಳವಡಿಸಿ ಉದ್ಘಾಟಿಸಿದರು. ಸಂಜೆ ಕಡೇಶಿವಾಲಯ ಗ್ರಾಮ ಪಂಚಾಯತ್ ಅಧ್ಯಕ್ಷ ಭಾರತಿ ಸುರೇಂದ್ರ ರಾವ್ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಜರಗಿತು.
ಈ ಸಂದರ್ಭ ನಿವೃತ್ತಿ ಹೊಂದಲಿರುವ ಶಿಕ್ಷಕರು ಕೆ. ಗೋಪಾಲಗೌಡ ಹಾಗೂ ವರ್ಗಾವಣೆಗೊಂಡ ಶಿಕ್ಷಕಿ ಜಯಲಕ್ಷ್ಮಿ ಪಿ. ಅವರನ್ನು ಗೌರವಿಸಲಾಯಿತು.
ಕಲಿಕೆ ಹಾಗೂ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಹಾಗೂ ಮಕ್ಕಳ ಪೋಷಕರಿಗೆ ಮಾಡಿದ ಸ್ಪರ್ಧೆಯ ಬಹುಮಾನ ವಿತರಿಸಲಾಯಿತು. ಕಡೇಶಿವಾಲಯ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುರೇಶ್ ಕನ್ನೊಟ್ಟು, ಪಂಚಾಯತ್ ಸದಸ್ಯರಾದ ಸುರೇಶ್ ಬನಾರಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಗಂಗಾಧರ ರೈ,ಐಡಿಯಲ್ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕ ಗಂಗಾಧರ ಶೇರಾ, ಹಿರಿಯ ವಿದ್ಯಾರ್ಥಿ ಸಂಶುದ್ದೀನ್ ಪಟ್ಲ, ಮಾಜಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಚೆನ್ನಪ್ಪ ಎಸ್ ಅಂಚನ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಚಂದ್ರಶೇಖರ, ಉಪಾಧ್ಯಕ್ಷೆ. ಉಷಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಿದಾನಂದ ಉಪಸ್ಥಿತರಿದ್ದರು. ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಅನಿತಾ ಕುಮಾರಿ ಸ್ವಾಗತಿಸಿ, ಹಿರಿಯ ಶಿಕ್ಷಕ ಕೆ ಗೋಪಾಲಗೌಡ ವಂದಿಸಿದರು. ಸಹ ಶಿಕ್ಷಕಿ ಜೋಸ್ನಾ ಪ್ರಿಯಾ ವಾಸ್ ಕಾರ್ಯಕ್ರಮ ನಿರೂಪಿಸಿದರು.ಗೌರವ ಶಿಕ್ಷಕಿಯರಾದ ಸುಮಲತಾ, ಸುರಕ್ಷಾ ಮತ್ತು ಅಭಿಜ್ಞಾ ಸಹಕರಿಸಿದರು.