ನಿಟಿಲಾಪುರದ ನಿವೃತ್ತ ಸೈನಿಕ ದಿನೇಶ್ ಕುಲಾಲ್ ಮತ್ತು ತೇಜಾಕ್ಷಿ ದಂಪತಿ ಪುತ್ರಿ, ಮಾಣಿ ಬಾಲವಿಕಾಸ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ ಕೃತಿ ಎನ್ ಪಿ. ಡಿಸ್ಕಸ್ ತ್ರೋ ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರು, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹಾಗೂ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಸಂಘಟನಾ ಪ್ರಭಾರಿ ದಿನೇಶ್ ಅಮ್ಟೂರು ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಬಿಜೆಪಿ ನಾಯಕರಾದ ಚಂದ್ರಶೇಖರ್ ಟೈಲರ್, ಗೋಳ್ತಮಜಲ್ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಗನ್ನಾಥ ಕುಲಾಲ್., ಮೀನಾಕ್ಷಿ ಕುಲಾಲ್, ದಿನೇಶ್ ಕುಲಾಲ್ ,ಗಿರೀಶ್ ಕುಲಾಲ್, ಸುರೇಶ್ ಕುಲಾಲ್, ಗಣೇಶ್ ಕುಲಾಲ್ ಉಪಸ್ಥಿತರಿದ್ದರು
ತಾಲೂಕು ಮಟ್ಟದ ಡಿಸ್ಕಸ್ ತ್ರೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ, ಜಿಲ್ಲಾ ಮಟ್ಟದಲ್ಲೂ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿದ್ದರು. 17 ವರ್ಷದ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದಿದ್ದು, ರಾಜ್ಯ ಮಟ್ಟದಲ್ಲೂ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಕೃತಿ ಡಿಸ್ಕಸ್ ತ್ರೋ ಮಾತ್ರವಲ್ಲದೇ ಬಂಟ್ವಾಳ ತಾಲೂಕು ಮಟ್ಟದ ಶಾರ್ಟ್ ಪುಟ್, ಹ್ಯಾಮರ್ ತ್ರೋ ಗಳಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದರು. ಅದೇ ರೀತಿ ಜಿಲ್ಲಾ ಮಟ್ಟದ ಜಂಪ್ ರೋಪ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುವ ಇವರು ವಲಯ ಮತ್ತು ತಾಲೂಕು ಮಟ್ಟದಲ್ಲಿ ವೈಯಕ್ತಿಕ ಸ್ಪರ್ಧೆಗಳ ವಿಭಾಗದಲ್ಲಿ ಚಾಂಪಿಯನ್ ಆಗಿಯೂ ಹೊರಹೊಮ್ಮಿದ್ದರು.