ಇತ್ತೀಚೆಗೆ ಸುಳ್ಯದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟದಲ್ಲಿ ಬಂಟ್ವಾಳ ತಾಲೂಕಿನ ಕೊಯಿಲ ಸರಕಾರಿ ಪ್ರೌಢಶಾಲೆಯ ಐದು ವಿದ್ಯಾರ್ಥಿಗಳು ಭಾಗವಹಿಸಿ ಕಟ ಹಾಗೂ ಕುಮಿಟೆ ಕಲರ್ ಬೆಲ್ಟ್ ವಿಭಾಗದಲ್ಲಿ ಮೂರು ಚಿನ್ನ ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕಗಳನ್ನು ಗಳಿಸಿದ್ದಾರೆ. ಶಾಲಾ ಮುಖ್ಯೋಪಾಧ್ಯಾಯಿನಿ ಸೌಜನ್ಯಾ, ದೈಹಿಕ ಶಿಕ್ಷಣ ಶಿಕ್ಷಕರಾದ ಜನಾರ್ದನ್, ಹಿರಿಯ ಶಿಕ್ಷಕಿ ಸೌಮ್ಯ ಎಚ್, ಕರಾಟೆ ತರಬೇತುದಾರರಾದ ಸೆನ್ಸಾಯಿ ಜೆರಾಲ್ಡ್ ಫೆರ್ನಾಂಡಿಸ್ ಫೆದಮಲೆ ವಿಜೇತರಾದ ವಿದ್ಯಾರ್ಥಿಗಳಿಗೆ ಅಭಿನಂದಿಸಿದರು